ಸಚಿವ ಸ್ಥಾನ ಸಿಗುವ ಭರವಸೆ ಇದೆ: ವಿಧಾನ ಪರಿಷತ್ ಸದಸ್ಯ ಆರ್. ಶಂಕರ್

ಹಾವೇರಿ: ‘ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಗೊತ್ತಿಲ್ಲ. ನನಗೆ ಸಚಿವ ಸ್ಥಾನ ಸಿಗುವ ಭರವಸೆಯಂತೂ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೇನೆ. ಸರ್ಕಾರ ತರಲು ನಾನು ಮತ್ತು ರಮೇಶ ಜಾರಕಿಹೊಳಿಯವರು ಜವಾಬ್ದಾರಿ ಹೊತ್ತಿದ್ದೆವು. ಒಳ್ಳೆಯ ಖಾತೆ ಕೊಟ್ಟರೆ ಅಭಿವೃದ್ಧಿ ಮಾಡಲು ಅನುಕೂಲ ಆಗುತ್ತದೆ’ ಎಂದು ಹೇಳಿದರು.
ಈಗ ಒಂದೂವರೆ ವರ್ಷ ವನವಾಸ ಅನುಭವಿಸಿದ್ದೇನೆ. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಾಗಲೂ ನಿಧಾನವಾಯ್ತು, ಸಚಿವ ಸ್ಥಾನ ಸಿಗುವುದೂ ನಿಧಾನವಾಯ್ತು. ಒಂದೂವರೆ ವರ್ಷ ವನವಾಸ ಅನುಭವಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನಾಗಲಿ ಅಥವಾ ನಾನು ಅವರನ್ನಾಗಲಿ ಇನ್ನೂ ಸಂಪರ್ಕಿಸಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ ಎಂದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.