ಶುಕ್ರವಾರ, ಆಗಸ್ಟ್ 6, 2021
25 °C

ಮನೆ– ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರ 2ನೇ ಅವಧಿಯ ಮೊದಲ ವರ್ಷದ ಸಾಧನೆ, ಕೊರೊನಾ ಸೋಂಕು ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ‘ಆತ್ಮ ನಿರ್ಭರ ಭಾರತ’ದ (₹20 ಲಕ್ಷ ಕೋಟಿ) ಪರಿಕಲ್ಪನೆಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕರಪತ್ರಗಳ ಮೂಲಕ ಮನೆ–ಮನೆ ಸಂಪರ್ಕದ ಅಭಿಯಾನಕ್ಕೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರು ಹಾವೇರಿ ನಗರದ 10ನೇ ವಾರ್ಡ್‌ನಲ್ಲಿ ಚಾಲನೆ ನೀಡಿದರು.

ಬಿಜೆಪಿ ರಾಷ್ಟ್ರ ಘಟಕದ ಯೋಜನೆಯಂತೆ ಪ್ರತಿ ಬೂತ್‌ನಲ್ಲಿ ಕನಿಷ್ಠ 100 ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳು, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಕೊರೊನಾ ತಡೆಗಟ್ಟುವಲ್ಲಿ ತೆಗೆದುಕೊಂಡ ದಿಟ್ಟ ಕ್ರಮಗಳು ಹಾಗೂ ಲಾಕ್ ಡೌನ್ ನಂತರ ದೇಶದ ಆರ್ಥಿಕ ಸುಧಾರಣೆಗಾಗಿ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ₹20 ಲಕ್ಷ ಕೋಟಿಗಳ ಪ್ಯಾಕೇಜ್‌ ನೀಡಿರುವ ಮಾಹಿತಿವುಳ್ಳ ಕರಪತ್ರಗಳನ್ನು ಜನರಿಗೆ ಹಂಚಲಾಯಿತು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಮುಖಂಡರಾದ ರಮೇಶ ಪಾಲನಕರ, ಬಸವರಾಜ ಮಾಸೂರ, ಬಸವರಾಜ ತುಪ್ಪುದ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು