ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೀಸಲಾತಿ ರದ್ದುಗೊಳಿಸುವ ಹೇಳಿಕೆ: ಬಿಜೆಪಿ ಪ್ರತಿಭಟನೆ

ರಾಹುಲ್ ಗಾಂಧಿ ಸದಸ್ಯತ್ವ ರದ್ಧತಿಗೆ ಆಗ್ರಹ
Published : 12 ಸೆಪ್ಟೆಂಬರ್ 2024, 15:51 IST
Last Updated : 12 ಸೆಪ್ಟೆಂಬರ್ 2024, 15:51 IST
ಫಾಲೋ ಮಾಡಿ
Comments

ಹಾವೇರಿ: ‘ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದುಗೊಳಿಸುವುದಾಗಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ಇದು ಸಂವಿಧಾನ ವಿರೋಧಿ ಹೇಳಿಕೆ’ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ರಾಹುಲ್ ಗಾಂಧಿ ಅವರ ಹೇಳಿಕೆ ಖಂಡಿಸಿ ಘೋಷಣೆ ಕೂಗಿದರು. ಬಿಜೆಪಿ ಎಸ್‌.ಸಿ ಮೋರ್ಚಾ ಮತ್ತು ಎಸ್‌.ಟಿ ಮೋರ್ಚಾ ನೇತೃತ್ವದಲ್ಲಿ ಪ‍್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ ಮಾತನಾಡಿ, ‘ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದ ಸಂವಿಧಾನ ಬದಲಾಯಿಸಲಿದೆ’ ಎಂಬುದಾಗಿ ರಾಹುಲ್ ಗಾಂಧಿಯವರು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದರು. ಇಂದು ಅವರೇ ಮೀಸಲಾತಿ ಕಿತ್ತುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.

ಎಸ್.ಸಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಪ್ಪ ಹರಿಜನ, ‘ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿಯವರನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಪರಮೇಶಪ್ಪ ಮೇಗಳಮನಿ, ರೇಖಾ ಕರಿಭೀಮಣ್ಣನವರ, ಶಿವಲಿಂಗಪ್ಪ ತಲ್ಲೂರ, ನಿಂಗಪ್ಪ ಗೊಬ್ಬೆರ, ನಂಜುಂಡೇಶ ಕಳ್ಳೇರ, ಡಾ. ಸಂತೋಷ ಆಲದಕಟ್ಟಿ, ಬಸವರಾಜ ಚಳಗೇರಿ, ಅಭಿಷೇಕ ಗುಡಗೂರ, ಉಮೇಶ ಮಾಗಳ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT