ಸೋಮವಾರ, ಜನವರಿ 17, 2022
20 °C
ಚರಣಜಿತ್‌ ಸಿಂಗ್‌ ಚನ್ನಿ ಪ್ರತಿಕೃತಿ ದಹನ

ಹಾವೇರಿ: ಪಂಜಾಬ್‌ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರ ರಕ್ಷಣೆಗೆ ಪಂಜಾಬ್‌ ಸರ್ಕಾರ ಉದ್ದೇಶಪೂರ್ವಕವಾಗಿ ಭಂಗ ತಂದಿದೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಶುಕ್ರವಾರ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 

ಪಂಜಾಬ್‌ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರ ಪ್ರತಿಕೃತಿಯನ್ನು ದಹನ ಮಾಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. 

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಹೊಸಳ್ಳಿ, ಪ್ರಧಾನಿಗೆ ಭದ್ರತಾ ಲೋಪದ ಘಟನೆ ಕಾಂಗ್ರೆಸ್‌ನ ಭಯೋತ್ಪಾದಕ ಮನೋಸ್ಥಿತಿಯನ್ನು ತೋರಿಸುತ್ತದೆ. ಈ ರಾಜಕೀಯ ದುರುದ್ದೇಶದ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಪ್ರಧಾನಿ ಮೋದಿ ಅವರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಪಂಜಾಬ್‌ ಸರ್ಕಾವನ್ನು ವಜಾಗೊಳಿಸುವಂತೆ ಆಗ್ರಹಿಸಿದರು.

ವಿಭಾಗಿಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಪಂಜಾಬನ ರಾಷ್ಟ್ರೀಯವಾದಿ ಜನರನ್ನು ದೇಶದ ಎದುರು ತೆಲೆತಗ್ಗಿಸುವಂತೆ ಮಾಡುವ ಹುನ್ನಾರದ ಕೆಲಸವನ್ನು ಪಂಜಾಬಿನ ಕಾಂಗ್ರೆಸ್‌ ಸರ್ಕಾರ ಮಾಡಿದೆ ಎಂದು ಆರೋಪಿಸಿದರು. 

ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ‘ಪಾಕಿಸ್ತಾನ ಗಡಿಯಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಫಿರೋಜ್‌ಪುರ ಸೇತುವೆ ಮೇಲೆ ಪ್ರಧಾನಿ ಮೋದಿ ಅವರನ್ನು ಸತತ 20 ನಿಮಿಷಗಳ ಕಾಲ ತಡೆಗಟ್ಟಿ, ಅವರ ಜೀವಕ್ಕೆ ಹಾನಿ ಮಾಡುವ ಕೃತ್ಯವನ್ನು ಪಂಜಾಬ್‌ನ ಕಾಂಗ್ರೆಸ್‌ ಸರ್ಕಾರ ಮಾಡಿದೆ. ಇದು ಅತ್ಯಂತ ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಕಿಡಿಕಾರಿದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರೇಶ ಚಿನ್ನಣ್ಣನವರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪವನಕುಮಾರ ಮಲ್ಲಾಡದ, ಉಪಾಧ್ಯಕ್ಷ ರುದ್ರಗೌಡ ಪಾಟೀಲ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರತೀಕ ಕೋಳೆಕರ, ದಯಾನಂದ ಜಾದವ್, ಅಭಿಷೇಕ ಬ್ಯಾಡಗಿ, ಅಭಿಷೇಕ ಗುಡಗೂರ, ಪ್ರಶಾಂತ ಕೋಡಿತ್ಕರ, ಪ್ರಭು ಹಿಟ್ನಳ್ಳಿ, ಗಿರೀಶ ತುಪ್ಪದ, ಬಾಬುಸಾಬ ಮೋಮಿನಗಾರ, ವಿವೇಕಾನಂದ ಇಂಗಳಗಿ, ಲಲಿತಾ ಗುಂಡೇನಹಳ್ಳಿ, ಲಲಿತಾ ಭೀಮಕ್ಕನವರ, ಪುಷ್ಪಾ ಚಕ್ರಸಾಲಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು