ಹಾವೇರಿ: ‘ಹುಬ್ಬಳ್ಳಿಯ ಕೇಶ್ವಾಪುರದ ಚಾಲುಕ್ಯ ನಗರದಲ್ಲಿ ಸುಜಾತಾ ಹಂಡಿ ಅವರನ್ನು ವಿವಸ್ತ್ರಗೊಳಿಸಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ಕುಮ್ಮಕ್ಕು ಕಾರಣ’ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಕಾರ್ಯಕರ್ತೆಯರು, ‘ದೌರ್ಜನ್ಯ ಎಸಗಿರುವ ಪೊಲೀಸರನ್ನು ಕೆಲಸದಿಂದ ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.

‘ಸುಜಾತಾ ಹಂಡಿ ಅವರು ಬಿಜೆಪಿ ಕಾರ್ಯಕರ್ತೆ. ಅವರನ್ನು ಗುರಿಯಾಗಿಸಿಕೊಂಡು ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಇದರ ಹಿಂದೆ ಹಲವು ಕಾಣದ ಕೈಗಳು ಕೆಲಸ ಮಾಡಿವೆ. ಪೊಲೀಸರಿಂದ ಸುಜಾತಾ ಮೇಲಾಗಿರುವ ದೌರ್ಜನ್ಯಕ್ಕೆ ನ್ಯಾಯ ಸಿಗಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಮತ್ತಷ್ಟು ಗಂಭೀರ ಸ್ವರೂಪದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸೀಮಗೌಡ್ರ ಮಾತನಾಡಿ, ‘ಇಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯದಂಥ ಪ್ರಕರಣಗಳು ನಡೆಯುತ್ತಿವೆ. ಹುಬ್ಬಳ್ಳಿ ಪ್ರಕರಣವು ಅತೀ ಅಮಾನವಿತೆಯಿಂದ ಕೂಡಿದೆ. ರಾಜ್ಯದ ಎಲ್ಲ ಮಹಿಳೆಯರು ಖಂಡಿಸುವಂತೆ ಪ್ರಕರಣ ಇದಾಗಿದೆ’ ಎಂದರು.

‘ಭ್ರಷ್ಟ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ಮಹಿಳೆಯರಿಗೆ ಗೌರವ ಇಲ್ಲದ ವಾತಾವರಣ ನಿರ್ಮಿಸಿದೆ. ಹುಬ್ಬಳ್ಳಿಯಲ್ಲಾದ ಹೀನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರನ್ನು ರಾಜ್ಯ ಸರ್ಕಾರ ಅಮಾನತು ಮಾಡಬೇಕು’ ಎಂದು ಅವರು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿ, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗೃಹ ಸಚಿವರು ನಿಷ್ಕ್ರಿಯ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಪದೆ ಪದೇ ದೌರ್ಜನ್ಯಗಳು ನಡೆಯುತ್ತಿದ್ದರೂ ಮೌನವಾಗಿದ್ದಾರೆ’ ಎಂದರು.

‘ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಕೊಲೆ, ದರೋಡೆಯಂಥ ಪ್ರಕರಣಗಳು ಹೆಚ್ಚಾಗಿವೆ. ಹುಬ್ಬಳ್ಳಿ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸುಜಾತಾ ಅವರನ್ನು ವಿವಸ್ತ್ರಗೊಳಿಸಿದ ಪೊಲೀಸರನ್ನು ತಕ್ಷಣವೇ ಕೆಲಸದಿಂದ ಅಮಾನತು ಮಾಡಿ, ಪ್ರಾಮಾಣಿಕ ತನಿಖೆಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ಬಿ.ಸಿ. ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ ಹಾಳಾಗಿದೆ. ಪದೇ ಪದೇ ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಮಹಿಳೆಯರಿಗೆ ಗೌರವ ಹಾಗೂ ರಕ್ಷಣೆ ಇಲ್ಲದಂತಾಗಿದೆ. ಪೊಲೀಸ್ ಇಲಾಖೆಯ ಮೇಲೆ ಕಾಂಗ್ರೆಸ್ ಸರ್ಕಾರ, ಹಿಡಿತ ಸಾಧಿಸಿದೆ. ತಮಗೆ ಬೇಕಾದ ರೀತಿಯಲ್ಲಿ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ದೂರಿದರು.

‘ಹುಬ್ಬಳ್ಳಿ ಪ್ರಕರಣದಿಂದ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು. ಮುಂಬರುವ ದಿನಗಳಲ್ಲಿ ಇಂಥ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

ಮುಖಂಡರಾದ ಶಿವರಾಜ ಸಜ್ಜನರ, ಅರುಣಕುಮಾರ ಪೂಜಾರ, ಗವಿಸಿದ್ದಪ್ಪ ದ್ಯಾಮಣ್ಣವರ, ನಂಜುಂಡೇಶ ಕಳ್ಳೇರ, ಸಂತೋಷ ಆಲದಕಟ್ಟಿ, ಸಿದ್ದರಾಜ ಕಲಕೋಟಿ, ಮುರಗೆಪ್ಪ ಶೆಟ್ಟರ, ಸುರೇಶ ಹೊಸಮನಿ, ನಾಗೇಂದ್ರ ಕಟಕೋಳ, ಕೆ. ಶಿವಲಿಂಗಪ್ಪ ಇದ್ದರು.

ಕಾನೂನು ರಕ್ಷಿಸುವ ಪೊಲೀಸರೇ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿರುವುದು ಸಮಾಜವೇ ತಲೆತಗ್ಗಿಸುವ ವಿಷಯ. ತಪ್ಪಿತಸ್ಥ ಪೊಲೀಸರನ್ನು ಅಮಾನತು ಮಾಡಬೇಕು
ಗವಿಸಿದ್ದಪ್ಪ ದ್ಯಾಮಣ್ಣವರ, ಬಿಜೆಪಿ ಮುಖಂಡ

ಜಿಲ್ಲೆಯಲ್ಲೂ ಅಕ್ರಮ ಚಟುವಟಿಕೆ

‘ಹಾವೇರಿ ಜಿಲ್ಲೆಯಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜೂಜಾಟ ಮದ್ಯ ಅಕ್ರಮ ಮಾರಾಟ ಮರಳು ದಂಧೆ... ಹೀಗೆ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿವೆ’ ಎಂದು ಬಿಜೆಪಿ ಕಾರ್ಯಕರ್ತರು ದೂರಿದರು. ‘ಕಾಂಗ್ರೆಸ್ನ ಕೆಲ ಮುಖಂಡರೇ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಇದಕ್ಕೆ ಕೆಲ ಶಾಸಕರು ಸಹಕಾರ ನೀಡುತ್ತಿರುವುದು ದುರಂತದ ಸಂಗತಿ. ಜನರೇ ಇಂಥ ಶಾಸಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.