ಹಿರೇಕೆರೂರ: ಬಿಜೆಪಿ ಯುವ ಮೋರ್ಚಾ ಸಭೆ

ಹಿರೇಕೆರೂರ: ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ಯುವಮೋರ್ಚಾ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಮುಂಬರುವ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ ತಿಳಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೊಡ್ಡಗೌಡ ಪಾಟೀಲ, ಯುವ ಮೋರ್ಚಾ ಅಧ್ಯಕ್ಷ ಮಧುಗೌಡ ಪಾಟೀಲ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹನುಮಂತ ಓಲೆಕಾರ, ಸಿದ್ದನಗೌಡ ಹಲಗೇರಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ದೇವರಾಜ ನಾಗಣ್ಣನವರ ಹಾಗೂ ಶಂಕರಗೌಡ ಚನಗೌಡ್ರ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.