ಗುರುವಾರ , ಜನವರಿ 28, 2021
27 °C

ಹಂಸಭಾವಿ: ಹಸುವಿಗೆ ನೀರು ಕುಡಿಸಲು ಹೋಗಿ ನೀರಲ್ಲಿ ಮುಳುಗಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಂಸಭಾವಿ: ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. 

ಪ್ರಮೋದ ಕಲ್ಲನಗೌಡ ಪಾಟೀಲ(11) ಮೃತ ಬಾಲಕ. ಹಸು ಮೇಯಿಸಲು ಹೋದ ಬಾಲಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ದೂರು ನೀಡಿದ್ದಾರೆ.

ಕೆರೆಯಲ್ಲಿ ಮುಳುಗಿರುವ ಶಂಕೆಯಿಂದ ಮಂಗಳವಾರ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಗ್ರಾಮಸ್ಥರು ಹುಡುಕಿ ಶವವನ್ನು ಹೊರ ತೆಗೆದಿದ್ದಾರೆ.  

ಈ ಕುರಿತು ಹಂಸಭಾವಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಜಯಪ್ಪ ನಾಯಕ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು