ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ₹2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

Published 17 ಮೇ 2024, 16:23 IST
Last Updated 17 ಮೇ 2024, 16:23 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್ಐ ಮತ್ತು ಕಾನ್‌ಸ್ಟೆಬಲ್ ಬಿದ್ದಿದ್ದಾರೆ.

ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ ಕಾಂದೆ ಮತ್ತು ಕಾನ್‌ಸ್ಟೆಬಲ್ ಸುರೇಶ ಮಾನೋಜಿ ಬಂಧಿತರು.

ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗೆ ₹5 ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ₹2 ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಯಿತು.

ಕಾನ್‌ಸ್ಟೆಬಲ್ ಸುರೇಶ ಮಾನೋಜಿ

ಕಾನ್‌ಸ್ಟೆಬಲ್ ಸುರೇಶ ಮಾನೋಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT