ಶನಿವಾರ, ಜೂನ್ 25, 2022
25 °C

₹55 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ತಾಲ್ಲೂಕಿನ ಆಲದಕಟ್ಟಿ ಪಿಡಿಒ ಸವಿತಾ ಯರೇಸೀಮೆ ₹55 ಸಾವಿರ ಲಂಚ ಪಡೆಯುವಾಗ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ. 

ಇ–ಸ್ವತ್ತಿನ ಉತಾರ ಮತ್ತು ಖಾತಾ ಬದಲಾವಣೆಗಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಅವರಿಗೆ ಲಂಚದ ಬೇಡಿಕೆ ಇಟ್ಟಿದ್ದರು. 

₹55 ಸಾವಿರ ಲಂಚದ ಹಣ ಜತೆಗೆ ಅಕ್ರಮವಾಗಿ ಕಚೇರಿಯಲ್ಲಿ ಇಟ್ಟುಕೊಂಡಿದ್ದ ₹30 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪಿಡಿಒ ಸವಿತಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ 

ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್‌. ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಪ್ರಭಾವತಿ ಶೇತಸನದಿ, ಬಸವರಾಜ ಬುದ್ನಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು