ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಸ್ಥ ಸಮಾಜ ನಿರ್ಮಿಸಿ'

Last Updated 18 ಡಿಸೆಂಬರ್ 2020, 16:21 IST
ಅಕ್ಷರ ಗಾತ್ರ

ಹಾವೇರಿ: ‘ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸೈನಿಕರೋಪಾದಿಯಲ್ಲಿ ಶ್ರಮಿಸುವ ಅಗತ್ಯವಿದೆ’ ಎಂದು ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯ ಕಿರಿಯ ಸಹಾಯಕ ಅಧಿಕಾರಿ ಮಾಲತೇಶ ಪುಟ್ಟನಗೌಡರ ತಿಳಿಸಿದರು.

ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ಸಂಘ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರ್ಥಿಕ, ಆರೋಗ್ಯ, ಶಿಕ್ಷಣ, ವ್ಯಾಪಾರ ಮೊದಲಾದ ರಂಗಗಳಲ್ಲಿ ಕೊರೊನಾ ತಲ್ಲಣ ಸೃಷ್ಟಿಸಿದೆ. ಕೊರೊನಾ ತಡೆಗಟ್ಟಲು ಎಲ್ಲರೂ ಜಾಗೃತಿವಹಿಸಬೇಕು.ಸರ್ಕಾರ ಸೂಚಿಸಿರುವ ಹಲವು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದರು.

ಇಲಾಖೆಯ ಕಿರಿಯ ಸಹಾಯಕ ಅಧಿಕಾರಿಗಳಾದ ಕೃಷ್ಣಪ್ಪ ಕನ್ನಮ್ಮನವರ, ಕುಮಾರ ಜವಳಿ, ವಿಭಾಗದ ಮುಖ್ಯಸ್ಥ ಪ್ರೊ.ಎಸ್. ಎಲ್. ಪಾಟೀಲ, ಪ್ರೊ.ಜಿ.ಎಸ್. ಬಾರ್ಕಿ ಇದ್ದರು. ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೊರೊನಾ ಮುಂಜಾಗ್ರತಾ ಕ್ರಮದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸುನೀಲ ಕೆ. ಹತ್ತಿ– ಪ್ರಥಮ, ರಶ್ಮಿ ಕೆ. ನಡುವಿನಮನಿ– ದ್ವಿತೀಯ, ಪವಿತ್ರ ಪಿ. ಹೂಗಾರ– ತೃತೀಯ ಸ್ಥಾನ ಪಡೆದರು. ಡಾ.ಗುರುಪಾದಯ್ಯ ಸಾಲಿಮಠ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಘದ ಕಾರ್ಯಾಧ್ಯಕ್ಷ ಪ್ರೊ.ರಮೇಶ ಅಜರೆಡ್ಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT