ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್‌, ಸಿಂದಗಿ ಉಪಚುನಾವಣೆಗಳಲ್ಲಿ ಕೆಆರ್‌ಎಸ್‌ ಸ್ಪರ್ಧೆ: ಲಿಂಗೇಗೌಡ

Last Updated 1 ಅಕ್ಟೋಬರ್ 2021, 12:03 IST
ಅಕ್ಷರ ಗಾತ್ರ

ಹಾವೇರಿ: ಸ್ವಚ್ಛ, ಜನಪರ ಮತ್ತು ಪ್ರಾದೇಶಿಕ ಹಿತಾಸಕ್ತಿಗಾಗಿ ಸ್ಥಾಪಿತವಾಗಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಲಿಂಗೇಗೌಡ ಎಸ್.ಎಚ್‌. ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣೆಗಳಲ್ಲಿ ಹಣ, ಹೆಂಡ, ಸೀರೆ ಅಥವಾ ಇತರೆ ಆಮಿಷಗಳನ್ನು ಒಡ್ಡದೆ, ಜಾತಿ ರಾಜಕಾರಣವನ್ನು ಮಾಡದೆ, ಉತ್ತಮ ಆಡಳಿತ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತೇವೆ. ನಾಲ್ವರು ಅಭ್ಯರ್ಥಿಗಳು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ವರಿಷ್ಠರು ಚರ್ಚಿಸಿ, ಉತ್ತಮ ಅಭ್ಯರ್ಥಿಯನ್ನು ಶೀಘ್ರ ಕಣಕ್ಕಿಳಿಸುತ್ತೇವೆ ಎಂದರು.

ರಾಜ್ಯದಲ್ಲಿ ಭ್ರಷ್ಟಾಚಾರ ಅತಿಯಾಗಿದ್ದು, ಜನರು ಸಂಕಷ್ಟದಲ್ಲಿದ್ದರೂ ಅವರನ್ನು ಕೇಳುವವರು ಇಲ್ಲದಂತಾಗಿದೆ. ರಾಜ್ಯದ ಬೊಕ್ಕಸ ಖಾಲಿಯಾಗಿದ್ದು, ಈಗಾಗಲೇ ಅತಿಯಾದ ಸಾಲದ ಭಾರದಿಂದ ನಲುಗುತ್ತಿದ್ದರೂ ಕೂಡ ಸರ್ಕಾರದ ದುಂದುವೆಚ್ಚ ನಿಂತಿಲ್ಲ. ‘ಭ್ರಷ್ಟರೇ ಪವಿತ್ರ ರಾಜಕಾರಣ ಬಿಟ್ಟು ತೊಲಗಿ, ನಾಡಪ್ರೇಮಿಗಳೆ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಅಭಿಯಾನವನ್ನು ರಾಜ್ಯದಾದ್ಯಂತ ಮಾಡಿದ್ದು, ಎಲ್ಲ ವಿಚಾರಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಜಾಲಿ, ಉಪಾಧ್ಯಕ್ಷ ಗುರನಗೌಡ ಸಿ.ಟಿ., ಸುಧೀರ್‌, ಮಂಜು ಹಾವನೂರ, ಚಂದ್ರಗೌಡ ವಡೇಗೌಡ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT