ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಪಚುನಾವಣೆ: ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡ್–ಸಲೀಂ ಅಹ್ಮದ್

Published 19 ಜೂನ್ 2024, 12:22 IST
Last Updated 19 ಜೂನ್ 2024, 12:22 IST
ಅಕ್ಷರ ಗಾತ್ರ

ಹಾವೇರಿ: 'ಶಿಗ್ಗಾವಿ-ಸವಣೂರು ವಿಧಾನಸಭಾ ‌ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡ್ ಇದೆ. ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ' ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.

ನಗರದಲ್ಲಿ‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯದ ಮೂರೂ ಉಪ‌ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ನಮ್ಮ ಗ್ಯಾರಂಟಿ ಯೋಜನೆಗಳು ಜನರ ಮನಗೆದ್ದಿವೆ. ಗ್ಯಾರಂಟಿ ಬಂದ್ ಮಾಡುವ ಪ್ರಶ್ನೆಯೇ ಇಲ್ಲ. ಶಿಗ್ಗಾವಿ- ಸವಣೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತಗಳು‌ ಬಂದಿವೆ. ಹೀಗಾಗಿ, ಕಾಂಗ್ರೆಸ್ ಪಕ್ಷದ ಟಿಕೆಟ್‌ಗೆ ಡಿಮ್ಯಾಂಡ್ ಇದೆ' ಎಂದು ಹೇಳಿದರು.

'ದುರಂಹಕಾರಿ ಕೇಂದ್ರ ಸರ್ಕಾರ, ಜನರ ವಿಶ್ವಾಸ ಕಳೆದುಕೊಂಡಿದ್ದು ಈ‌ ಬಾರಿಯ‌ ಲೋಕಸಭಾ ಚುನಾವಣೆಯಿಂದ ಗೊತ್ತಾಗಿದೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT