ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಟ್ಟೀಹಳ್ಳಿ ಮಾರ್ಗವಾಗಿ ಶೀಘ್ರವೇ ರೈಲ್ವೆ ಮಾರ್ಗ : ಬಿ.ವೈ. ರಾಘವೇಂದ್ರ

Published 16 ನವೆಂಬರ್ 2023, 13:18 IST
Last Updated 16 ನವೆಂಬರ್ 2023, 13:18 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ‘ರಾಣೆಬೆನ್ನೂರಿನಿಂದ ಕೊಲ್ಲೂರಿಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಭಾಗದಲ್ಲಿ ₹170 ಕೋಟಿ ವೆಚ್ಚದಲ್ಲಿ ಒಟ್ಟು 27 ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಅವರು ರಟ್ಟೀಹಳ್ಳಿ ಪಟ್ಟಣದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲಿಸಿ ಮಾತನಾಡಿದರು.

‘ರಟ್ಟೀಹಳ್ಳಿ ಮಾರ್ಗವಾಗಿ ಶೀಘ್ರವೇ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ’ ಎಂದು ತಿಳಿಸಿದರು.

ಬಿಜೆಪಿ ಮುಖಂಡರಾದ ಶಂಭಣ್ಣ ಗೂಳಪ್ಪನವರ, ಶಂಕರಗೌಡ ಚನ್ನಗೌಡ್ರ, ಉಜಿನೆಪ್ಪ ಕೋಡಿಹಳ್ಳಿ, ಶ್ರೀನಿವಾಸ ಭೈರೋಜಿಯವರ, ರಾಘವೇಂದ್ರ ಹರವಿಶೆಟ್ಟರ್, ರವೀಂದ್ರ ಹರವಿಶೆಟ್ಟರ, ಮುರಳಿ ಬಾಜಿರಾಯರ, ಶಿವರಾಜ ಗೂಳಪ್ಪನವರ, ಶಿದ್ದಪ್ಪ ಹರಿಜನ, ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್, ಗುತ್ತಿಗೆದಾರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT