ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೈಜ್ಞಾನಿಕ ಮನೋಭಾವ ಬೆಳೆಸಿ’

Published 29 ಫೆಬ್ರುವರಿ 2024, 15:41 IST
Last Updated 29 ಫೆಬ್ರುವರಿ 2024, 15:41 IST
ಅಕ್ಷರ ಗಾತ್ರ

ಬ್ಯಾಡಗಿ: ‘ವಿಜ್ಞಾನ ಹಲವಾರು ಅವಕಾಶಗಳನ್ನು ನೀಡಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲೇ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.

ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನ ಶಕ್ತಿಯನ್ನು ಅನಾವರಣಗೊಳಿಸಿದೆ’ ಎಂದರು.

ಪ್ರಧಾನ ಮಂತ್ರಿ ಪೋಷಣಾ ಅಭಿಯಾನದ ಜಿಲ್ಲಾ ಅಧಿಕಾರಿ ಝಡ್‌.ಎಂ. ಖಾಜಿ ಮಾತನಾಡಿ,
‘ವಿಜ್ಞಾನದಿಂದಾಗಿ ಜಗತ್ತೇ ಅಂಗೈಯಲ್ಲಿದೆ. ಮಕ್ಕಳಿಗೆ ವಿಜ್ಞಾನದ ಆಸಕ್ತಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದರು.

ವಿಶ್ವನಾಥ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಸಿ.ಎನ್. ಕರಿಯಪ್ಪನವರ, ವಿಷಯ ಪರಿವೀಕ್ಷಕ ಸುರೇಶ ಮೂಡಲದವರ, ವಿ.ಎಸ್. ಪಾಟೀಲ, ಹನುಮಂತಗೌಡ ನರೇಗೌಡ್ರ, ಭರಮಪ್ಪ ಕುರುವತ್ತಿ, ವಿದ್ಯಾ ಕುರಹಟ್ಟಿ, ವಿ.ಡಿ.ಅಕ್ಕೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT