ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ

Published 6 ಅಕ್ಟೋಬರ್ 2023, 14:29 IST
Last Updated 6 ಅಕ್ಟೋಬರ್ 2023, 14:29 IST
ಅಕ್ಷರ ಗಾತ್ರ

ಬ್ಯಾಡಗಿ: ಇಲ್ಲಿn ಕೃಷಿ ಉತ್ಪನ್ನ ಮಾರುಕಟ್ಟೆಗೆ ಶುಕ್ರವಾರ 3,061 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದೆ.

ಕಳೆದ ಮಂಗಳವಾರ ಮಾರುಕಟ್ಟೆಗೆ 959 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು.‌

ಶುಕ್ರವಾರ ತೇವಾಂಶ ಹೆಚ್ಚಿರುವ 74 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 46 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹60,000 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ₹6ಸಾವಿರ ಇಳಿಕೆ ಕಂಡಿದೆ. 11 ಚೀಲ ಕಡ್ಡಿ ಮೆಣಸಿನಕಾಯಿ ₹52,000 ರಂತೆ ಹಾಗೂ ಗುಂಟೂರ ತಳಿ ಮೆಣಸಿನಕಾಯಿ ₹18,689 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ.

ಸರಾಸರಿ ಬೆಲೆಯಲ್ಲಿ ಡಬ್ಬಿ ಮೆಣಸಿನಕಾಯಿ ₹42,209, ಕಡ್ಡಿ ಮೆಣಸಿನಕಾಯಿ ₹33,509 ಹಾಗೂ ಗುಂಟೂರ ತಳಿ ₹16,509 ರಂತೆ ಮಾರಾಟವಾಗಿದ್ದು ತುಸು ಇಳಿಕೆ ಕಂಡಿದೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 87 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT