ಬ್ಯಾಡಗಿ: ತಾಲ್ಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮ ಮಗುವಿನ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿ ಗಾಯಗೊಳಿಸಿದೆ ಎಂದು ಆರೋಪಿಸಿ ಬುಧವಾರ ಗ್ರಾಮ ಪಂಚಾಯಿತಿ ಕಚೇರಿಗೆ ಗ್ರಾಮಸ್ಥರು ಹಾಕಿದ್ದ ಬೀಗವನ್ನು ಗುರುವಾರ ತೆರವುಗೊಳಿಸಲಾಯಿತು.

ತಾ.ಪಂ ಇಒ ಕೆ.ಎಂ.ಮಲ್ಲಿಕಾರ್ಜುನ ಗ್ರಾಮಕ್ಕೆ ತೆರಳಿ ಗ್ರಾಮಸ್ಥರ ಆಕ್ರೋಶ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ಶುಕ್ರವಾರದಿಂದ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಚರಣೆ ನಡೆಸಲಾಗುವುದೆಂದು ಭರವಸೆ ನೀಡಿದರು. ನಾಯಿಗಳ ದಾಳಿಯಿಂದ ಗಾಯಗೊಂಡಿದ್ದ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಕರ್ತವ್ಯ ಲೋಪ ಎಸಗಿದ ಪಿಡಿಒ ಅವರನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದ ಗ್ರಾಮಸ್ಥರು, ಗ್ರಾಮದಲ್ಲಿ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ಕೊರತೆ ಎದ್ದು ಕಾಣುತ್ತಿದೆ. ಚರಂಡಿಗಳು ಕಸದ ತ್ಯಾಜ್ಯದಿಂದ ತುಂಬಿದ್ದು, ಕಸ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಏನಾದರೂ ಕೇಳಿದರೆ ಉಡಾಫೆ ಉತ್ತರ ನೀಡುವ ಇಲ್ಲಿಯ ಪಿಡಿಒ ನಮ್ಮಲ್ಲಿ ಕಾರ್ಯನಿರ್ವಹಿಸುವುದು ಬೇಡ ಎಂದು ಒತ್ತಾಯಿಸಿದರು.

ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕೆಂಬ ನಿಯಮ ಇದ್ದರೂ ಅಲ್ಲಿದ್ದೇನೆ, ಇಲ್ಲಿದ್ದೇನೆ ಎಂದು ಸಬೂಬು ಹೇಳಿ ಜಾರಿಕೊಳ್ಳುತ್ತಿರುವ ಪಿಡಿಒ ಅವರಿಂದ ಏನು ನಿರೀಕ್ಷಿಸಲು ಸಾಧ್ಯ ಪ್ರಶ್ನಿಸಿದರು. ಪರಶುರಾಮ ಅಗಸಿಬಾಗಿಲ, ಶಿವರಾಜ ದೇಸೂರು, ವೀರೇಶ ದೇಸೂರು, ರಮೇಶ ಬೂದಗಟ್ಟಿ, ಆರ್.ಹನುಮಂತಪ್ಪ, ರುದ್ರಪ್ಪ ಹಿರೇಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-22-1449548943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.