ಬ್ಯಾಡಗಿ: ಪಟ್ಟಣದ ಶಿವಪುರ ಬಡಾವಣೆಯ ಕನ್ನಡ ಸಾಹಿತ್ಯ ಭವನದಲ್ಲಿ ಕಳೆದ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100ರಷ್ಟು ಅಂಕ ಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಾಲ್ಲೂಕು ಘಟಕ ಆಯೋಜಿಸಿರುವ ಕಾರ್ಯಕ್ರಮವನ್ನು ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸುವರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಬಿಇಒ ಎಸ್.ಜಿ.ಕೋಟಿ, ಸಾಹಿತಿ ಸಂಕಮ್ಮ ಸಂಕಣ್ಣನವರ, ಪಿ.ಟಿ.ಲಕ್ಕಣ್ಣನವರ, ಎಸ್,ಜಿ.ವೈದ್ಯ, ಎಸ್.ಎನ್.ನಿಡಗುಂದಿ ಹಾಗೂ ಇನ್ನಿತರರು ಪಾಲ್ಗೊಳ್ಳುವರು.

ಬಿಇಎಸ್ಎಂ ಕಾಲೇಜಿನ ಪ್ರಾಧ್ಯಾಪಕ ಶಿವನಗೌಡ ಪಾಟೀಲ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪುರ ವಹಿಸುವರು. ಎಸ್ಎಸ್ಎಲ್ಸಿಯಲ್ಲಿ 28 ಹಾಗೂ ದ್ವಿತೀಯ ಪಿಯುಸಿಯಲ್ಲಿ 4 ವಿದ್ಯಾರ್ಥಿಗಳು ಅಲ್ಲದೆ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.