ಬ್ಯಾಡಗಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಆತ್ಮನಿರ್ಭರ ಭಾರತ ದ್ವಿದಳ ಧಾನ್ಯಗಳ ಮಿಷನ್‘ ಅಡಿಯಲ್ಲಿ ತಾಲ್ಲೂಕಿನ ಅರ್ಹ ರೈತರಿಗೆ ಉಚಿತ ದ್ವಿದಳ ಧಾನ್ಯಗಳ ಬೀಜದ ಕಿಟ್ಗಳನ್ನು ಬುಧವಾರ ವಿತರಿಸಲಾಯಿತು.

ಕಾರ್ಯಕ್ರಮಕ್ಕೆ ಕೆಸಿಸಿ ಬ್ಯಾಂಕ್ ನಿರ್ದೇಶಕ ಚನ್ನಬಸಪ್ಪ ಹುಲ್ಲತ್ತಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ದ್ವಿದಳ ಧಾನ್ಯಗಳ ಉತ್ಪಾದನೆ ಹೆಚ್ಚಿಸಿ ರೈತರ ಆದಾಯವನ್ನು ವೃದ್ಧಿಸುವುದು ಸದರಿ ಯೋಜನೆಯ ಉದ್ದೇಶವಾಗಿದೆ. ದ್ವಿದಳ ಧಾನ್ಯ ಮಣ್ಣಿನ ಫಲವತ್ತತೆ ಹೆಚ್ಚಿಸುವುದರ ಜೊತೆಗೆ, ಜನರ ಪೌಷ್ಟಿಕಾಂಶ ಭದ್ರತೆಯಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. ಕಾರಣ ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸುವಂತೆ ಮನವಿ ಮಾಡಿಕೊಂಡರು.

ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಬೆನಕನಕೊಂಡ ಮಾತನಾಡಿ, ದ್ವಿದಳ ಧಾನ್ಯಗಳ ಬೇಡಿಕೆ ಹೆಚ್ಚುತ್ತಿದ್ದು, ರೈತರು ಸುಧಾರಿತ ತಳಿಗಳ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಗಣೇಶ ಕಮ್ಮಾರ ಪ್ರಸ್ತಾವಿಕವಾಗಿ ಮಾತನಾಡಿ, ಅಧಿಕ ಇಳುವರಿ ನೀಡುವ, ಹವಾಮಾನ ವೈಪರೀತ್ಯಗಳನ್ನು ಸಹಿಸಬಲ್ಲ, ಕೀಟ ಹಾಗೂ ರೋಗ ನಿರೋಧಕ ಗುಣಗಳನ್ನು ಹೊಂದಿರುವ ಪ್ರಮಾಣಿತ ಬೀಜಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ಭತ್ತ ನಂತರದ ಪಾಳು ಪ್ರದೇಶ, ಅಂತರಬೆಳೆ ಪದ್ಧತಿ ಮತ್ತು ವಿಸ್ತರಣೆಗೆ ಅವಕಾಶವಿರುವ ಪ್ರದೇಶದಲ್ಲಿ ಬೆಳೆಯಲು ವಿಶೇಷ ಆದ್ಯತೆ ನೀಡಲಾಗಿದೆ ಎಂದರು.

ಎನ್.ಟಿ. ಪಾಟೀಲ, ಶಂಕರಗೌಡ ಪಾಟೀಲ, ಬಸವರಾಜ ಸಂಕಣ್ಣನವರ, ಮಲ್ಲನಗೌಡ ಭದ್ರಗೌಡ್ರ, ಶಿವಪ್ಪ ಪೋಟೇರ, ಎಸ್.ಎನ್.ತೋಟದ, ಕೃಷಿ ಅಧಿಕಾರಿಗಳಾದ ನಿಂಗಪ್ಪ ಕಾಕೋಳ, ನಾಗರಾಜ ಬನ್ನಿಹಟ್ಟಿ ಹಾಗೂ ಸಿಬ್ಬಂದಿ ಮತ್ತು ರೈತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-22-845639919

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.