ಬ್ಯಾಡಗಿ: ಪಟ್ಟಣದ ಮುಖ್ಯ ರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ವಿಸ್ತರಣಾ ಕಾರ್ಯ 6ನೇ ದಿನವೂ ಮುಂದುವರಿಯಿತು.

ಅತಿ ದೊಡ್ಡ ಕಟ್ಟಡಗಳ ತೆರವು ಕಾರ್ಯದ ಜವಾಬ್ದಾರಿಯನ್ನು ಕಟ್ಟಡ ಮಾಲೀಕರೇ ವಹಿಸಿಕೊಂಡಿದ್ದರಿಂದ ತೆರವು ಕಾರ್ಯ ವಿಳಂಬವಾಗುತ್ತಿದೆ. ಅಲ್ಲದೇ ಈಗಾಗಲೇ ತೆರವುಗೊಳಿಸಿರುವ ಕಟ್ಟಡಗಳ ಅವಶೇಷಗಳನ್ನು ವಿಲೇವಾರಿ ಮಾಡುವ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಇದರಿಂದ ಮುಖ್ಯರಸ್ತೆಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಬಾಗಿಲವರೆಗೆ ಬಿದ್ದಿರುವ ಮಣ್ಣಿನ ಗುಡ್ಡೆಗಳನ್ನು ತೆರವುಗೊಳಿಸದೇ ಇರುವುದರಿಂದ ಮನೆಯಿಂದ ಹೊರಗೆ ಬರಲು ತೊಂದರೆಯಾಗುತ್ತಿದೆ ಎಂದು ಕೆಲ ನಿವಾಸಿಗಳು ಆರೋಪಿಸಿದರು. ಮಣ್ಣಿನ ಗುಡ್ಡೆಗಳನ್ನು ಶೀಘ್ರ ತೆರವುಗೊಳಿಸಬೇಕು. ಕುಡಿಯುವ ನೀರು, ಶೌಚಕ್ಕೆ ನೀರು ಇಲ್ಲದೇ ತೀವ್ರ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಶೆಟ್ಟರ್ ಬಿಲ್ಡಿಂಗ್, ಕಬ್ಬೂರ ಬಿಲ್ಡಿಂಗ್ ಸೇರಿದಂತೆ ಇನ್ನೂ 30ಕ್ಕೂ ಹೆಚ್ಚು ಕಟ್ಟಡಗಳ ತೆರವು ಕಾರ್ಯ ಪೂರ್ಣಗೊಳ್ಳಬೇಕಾಗಿದೆ. ಟ್ರ್ಯಾಕ್ಟರ್ ಹಾಗೂ ಟಿಪ್ಪರ್ಗಳ ಸಂಖ್ಯೆಗಳನ್ನು ಹೆಚ್ಚಿಸಿ ಕಟ್ಟಡ ಅವಶೇಷಗಳ ವಿಲೇವಾರಿ ಮಾಡಲು ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತೆರವುಗೊಳಿಸುವ ಜವಾಬ್ದಾರಿಯನ್ನು ಪುರಸಭೆಗೆ ವಹಿಸಲಾಗಿದೆ. ರಸ್ತೆ ಅಭಿವೃದ್ಧಿಯನ್ನು ಎಪಿಎಂಸಿಗೆ ವಹಿಸಲಾಗಿದೆ. ಇದರಲ್ಲಿ ನಮ್ಮದೇನು ಪಾತ್ರವಿಲ್ಲ ಎಂದು ಹೇಳುವ ಮೂಲಕ ಲೋಕೋಪಯೋಗಿ ಇಲಾಖೆಯ ಎಇಇ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಸಿಸಿ ಬ್ಯಾಂಕ್ನಿಂದ ಸುಭಾಸ ವೃತ್ತ, ಮುರಿಗೆಪ್ಪ ಶೆಟ್ಟರ ಕಟ್ಟಡ, ಜೈನ್ ಮಂದಿರದ ಮುಖ್ಯ ದ್ವಾರ, ರಾಜಸ್ಥಾನ ಕಟ್ಟಡ, ಕಬ್ಬೂರ ಬಿಲ್ಡಿಂಗ್ ತೆರವು ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಉಳಿದ ಕಾರ್ಯಕ್ಕೂ ಅಡಚಣೆಯಾಗಿದೆ ಎನ್ನಲಾಗಿದೆ. ಮಳೆ ಆರಂಭವಾದರೆ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಸಹಕರಿಸಿದರೆ ಮಾತ್ರ ನಿರ್ದಿಷ್ಟ ಅವಧಿಯಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-22-818842880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.