ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ: ಹೆದ್ದಾರಿ ವಿಸ್ತರಣೆಗೆ ಆಗ್ರಹಿಸಿ ಸತ್ಯಾಗ್ರಹ

Published 28 ಫೆಬ್ರುವರಿ 2024, 7:35 IST
Last Updated 28 ಫೆಬ್ರುವರಿ 2024, 7:35 IST
ಅಕ್ಷರ ಗಾತ್ರ

ಬ್ಯಾಡಗಿ: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾದು ಹೋಗಿರುವ ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ವಿಸ್ತರಣೆ ವಿಳಂಬ ಖಂಡಿಸಿ ಹಳೇ ಪುರಸಭೆ ಎದುರು ಮುಖ್ಯ ರಸ್ತೆ ವಿಸ್ತರಣೆ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಅನಿರ್ದಿಷ್ಟಾವಧಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಮಾತನಾಡಿ, ‘ಸಾರ್ವಜನಿಕರ ಹಿತದೃಷ್ಠಿಯಿಂದ ಮುಖ್ಯರಸ್ತೆ ವಿಸ್ತರಣೆ ಮಾಡುವಂತೆ 14 ವರ್ಷಗಳಿಂದ ವಿವಿಧ ರೀತಿಯ ಹೋರಾಟ ಮಾಡಲಾಗಿದೆ. ಆದರೆ, ಲೋಕೋಪಯೋಗಿ ಇಲಾಖೆ  ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಭೂಸ್ವಾಧೀನ ಪ್ರಕ್ರಿಯೆ ವಿಳಂಭವಾಗಿದೆ. ಸದ್ಯ ಭೂಸ್ವಾಧೀನ ಪ್ರಕ್ರಿಯೆಗೆ ಪೂರ್ವ ಅಧಿಸೂಚನೆ ಹೊರಡಿಸಿದ್ದರೂ ಅಧಿಕಾರಿಗಳು ಮುಂದೂಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕಿರಿದಾದ ರಸ್ತೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರಸ್ತೆ ವಿಸ್ತರಣೆಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.

ವಕೀಲರ ಸಂಘ, ರೈತ ಸಂಘ ಸೇರಿದಂತೆ ಹಲವಾರು ಸಂಘ–ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿದವು. ಸಮಿತಿ ಸದಸ್ಯರಾದ ಕಿರಣಕುಮಾರ ಎಂ.ಎಲ್., ಪಾಂಡುರಂಗ ಸುತಾರ, ರೈತ ಮುಖಂಡ ಕೆ.ವಿ. ದೊಡ್ಡಗೌಡ್ರ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT