ಬ್ಯಾಡಗಿ: ಪಟ್ಟಣದ ಕದರಮಂಡಲಗಿ ರಸ್ತೆಯ ಶೈರಣ್ಯ ನಗರದ ಶಿರಡಿ ಸಾಯಿಬಾಬಾ ಮಂದಿರದ ಆವರಣದಲ್ಲಿ ಮುಖ್ಯ ಮಂತ್ರಿಗಳ ₹25 ಲಕ್ಷ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ‘ದಾಸೋಹ ಭವನ‘ಕ್ಕೆ ಗುರುವಾರ ಶಾಸಕ ಬಸವರಾಜ ಶಿವಣ್ಣನವರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ದೇವಸ್ಥಾನಗಳು ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಜ್ಞಾನ ಬಿಂಬಿಸುವ ನೆಮ್ಮದಿ ಕೇಂದ್ರಗಳಾಗಿದ್ದು, ಮಾನಸಿಕ ಶಾಂತಿ ಮತ್ತು ನೆಮ್ಮದಿ ಒದಗಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತರುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ರಾಣೆಬೆನ್ನೂರು ಶನೇಶ್ವರ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದೇವಸ್ಥಾನಗಳಿಂದ ಶಾಂತಿಯ ವಾತಾವರಣ, ಮಂತ್ರ ಘೋಷಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತವೆ. ಧಾರ್ಮಿಕ ಆಚರಣೆಗಳು ಮನುಷ್ಯನಿಗೆ ಶಿಸ್ತು ಮತ್ತು ಧರ್ಮದ ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತವೆ ಎಂದರು.

ಶಿರಡಿ ಸಾಯಿಬಾಬಾ ಪ್ರತಿಷ್ಠಾನದ ಧರ್ಮದರ್ಶಿ ಮಂಜಯ್ಯಶಾಸ್ತ್ರಿ ಹಿರೇಮಠ, ಗಿರೀಶ ಇಂಡಿಮಠ, ಕೆ.ರವೀಂದ್ರ, ಮಾಜಿ ಸೈನಿಕ ರಾಜಣ್ಣ ಹೊಸಳ್ಳಿ, ಎಎಸ್ಐ ಎನ್.ವಿ.ನಂದಿಗೌಡ್ರ, ಗಣೇಶ ಕುದ್ರಾಳ, ದಾನಪ್ಪ ಚೂರಿ, ಗೀತಕ್ಕ ಕಬ್ಬೂರ, ಬಿ.ಎಸ್.ಕೊಪ್ಪದ, ಡಾ.ಎ.ಎಂ.ಸೌದಾಗರ, ರಾಜೇಸಾಬ ಕಳ್ಯಾಳ, ದುರ್ಗೇಶ ಗೊಣೆಮ್ಮನವರ, ಅಬ್ದುಲ್ಮುನಾಫ್ ಎರೆಶೀಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-22-775128297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.