ಬ್ಯಾಡಗಿ: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ವಿಸ್ತರಣಾ ಕಾರ್ಯ ಕಳೆದ ಶನಿವಾರದಿಂದ ಆರಂಭವಾಗಿದ್ದು, ಮಂಗಳವಾರವೂ ಮುಂದುವರೆದಿದೆ. ಇದುವರೆಗೆ ಶೇ 80ರಷ್ಟು ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ಮಂಗಳವಾರ ಬೆಳಿಗ್ಗೆ ತೆರವು ಕಾರ್ಯಾಚರಣೆ ಕಾಮಗಾರಿ ವೀಕ್ಷಿಸಿದ ಬಳಿಕ ‘ಪ್ರಜಾವಾಣಿ‘ಯೊಂದಿಗೆ ಅವರು ಮಾತನಾಡಿದರು. ರಸ್ತೆ ಮಧ್ಯದಿಂದ ಎರಡೂ ಬದಿಗೂ 33 ಅಡಿ ಅಳತೆಯಷ್ಟು ತೆರವುಗೊಳಿಸುತ್ತಿರುವುದನ್ನು ಖಚಿತಪಡಿಸಕೊಂಡರು. ಕಟ್ಟಡದ ತೆರವಿಗೆ ವಿಳಂಭ ಮಾಡುತ್ತಿರುವ ಭೂಮಾಲೀಕರನ್ನು ಮಾತನಾಡಿಸಿ ಕೆಲಸವನ್ನು ಆದಷ್ಟು ಪೂರ್ಣಗೊಳಿಸುವಂತೆ ಮನವಿ ಮಾಡಿಕೊಂಡರು.

ಪರಿಹಾರದ ಹಣ ಪಡೆಯದ ಭೂಮಾಲೀಕರೊಂದಿಗೆ ನಡೆಸಿದ ಸಂಧಾನದ ಬಳಿಕ ತೆರವುಗೊಳಿಸುವ ಕಾರ್ಯ ಮತ್ತಷ್ಟು ಚುರುಕುಗೊಂಡಿದೆ. ಮುಂದಿನ ಶನಿವಾರದೊಳಗೆ ತೆರವು ಕಾರ್ಯ ಪೂರ್ಣಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಪಟ್ಟಣದ ಕೆಸಿಸಿ ಬ್ಯಾಂಕ್ನಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಒಟ್ಟು 1,050 ಮೀ ರಸ್ತೆ ವಿಸ್ತರಣೆಯಾಗಲಿದೆ.

ರಸ್ತೆ ಅಭಿವೃದ್ಧಿಗೆ ಸರ್ಕಾರ ₹ 13ಕೋಟಿ ಹಣ ಬಿಡುಗಡೆಗೊಳಿಸಿದೆ. ಈ ಕುರಿತು ಬುಧವಾರ ಸಭೆ ನಡೆಸಿ ಡಿಪಿಆರ್ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ, ಲೋಕೋಪಯೋಗಿ ಇಲಾಖೆ ಎಇಇ ಆಂಜನೇಯ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-22-1966131398

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.