ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಡಗಿ ಸರ್ಕಾರಿ ಪಾಲಿಟೆಕ್ನಿಕ್ ಪ್ರವೇಶ ಆರಂಭ

Published 2 ಜೂನ್ 2024, 13:46 IST
Last Updated 2 ಜೂನ್ 2024, 13:46 IST
ಅಕ್ಷರ ಗಾತ್ರ

ಹಾವೇರಿ: ಬ್ಯಾಡಗಿ ಪಟ್ಟಣದಲ್ಲಿ ಹೊಸದಾಗಿ ಪ್ರಾರಂಭವಾದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2024-25ನೇ ಸಾಲಿಗೆ ಮೂರು ವರ್ಷದ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಗಳು ಆರಂಭವಾಗಿವೆ.

ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಹಾಗೂ ಕ್ಲೌಡ್ ಕಂಪ್ಯೂಟಿಂಗ್ ಕೋರ್ಸ್‌ಗಳಿಗೆ ನವದೆಹಲಿ ಎಐಸಿಟಿಇ ಇಂದ ಅನುಮೋದನೆ ದೊರೆತಿದ್ದು, ಪ್ರತಿ ಕೋರ್ಸ್‌ಗಳಿಗೆ 63 ವಿದ್ಯಾರ್ಥಿಗಳಂತೆ 252 ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅವಕಾಶವಿದೆ.

ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನೇರವಾಗಿ ಸಂಸ್ಥೆಗೆ ಭೇಟಿ ನೀಡಿ, ಮೂಲ ದಾಖಲೆಗಳೊಂದಿಗೆ ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದು ಎಂದು ಬ್ಯಾಡಗಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಚಂದ್ರಶೇಖರ ಗಂಟಿಸಿದ್ದಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT