ಸಿಸಿ ಕ್ಯಾಮೆರಾ ಅಳವಡಿಕೆಗೆ ₹ 10 ಲಕ್ಷ
ಬ್ಯಾಡಗಿ ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು. ಜನಸಂದಣಿ ಹಾಗೂ ವಾಹನಗಳ ದಟ್ಟಣೆ ಇರುವ ಕಡೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಲು ಅನುಕೂಲವಾಗುವಂತೆ ಸಿಸಿ ಕ್ಯಾಮೆರಾ ಅಳವಡಿಸಲು ₹10 ಲಕ್ಷ ನೆರವು ನೀಡಲಾಗುವುದು. ಕಾಗಿನೆಲೆ ಪೊಲೀಸ್ ಠಾಣೆಗೂ ಹೊಸ ವಾಹನ ಕೊಡಿಸಲಾಗುವುದು