ಗುರುವಾರ , ಅಕ್ಟೋಬರ್ 29, 2020
28 °C
ಸಹಾಯವಾಣಿ, ಮಾಸ್ಕ್ ಕುರಿತು ಜಾಗೃತಿ

ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ: ನಗರಠಾಣೆ ಸಿಪಿಐ ಎಂ.ಐ. ಗೌಡಪ್ಪಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಣೆಬೆನ್ನೂರು: ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಒಂದೇ ಭಾರತ, ಒಂದೇ ತುರ್ತು ಕರೆ ಸಂಖ್ಯೆ 112 ಸಹಾಯವಾಣಿ ಪ್ರಾರಂಭವಾಗಿದೆ. ಇನ್ನು ಮುಂದೆ ಸಾರ್ವಜನಿಕರು ತುರ್ತು ಕರೆ ಮಾಡಿ ವೈದ್ಯಕೀಯ, ಪೊಲೀಸ್‌, ಆಂಬುಲೆನ್ಸ್‌, ಅಗ್ನಿಶಾಮಕ ನೆರವು ಪಡೆಯಲು ಮೇಲಿನ ಸಂಖ್ಯೆಗೆ ಕರೆ ಮಾಡಬೇಕು ಎಂದು ನಗರಠಾಣೆ ಸಿಪಿಐ ಎಂ.ಐ. ಗೌಡಪ್ಪಗೌಡ ಹೇಳಿದರು.

112 ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಬಗ್ಗೆ ಮಾಹಿತಿ ನೀಡುವ ಮತ್ತು ಮಾಸ್ಕ್‌ ಧರಿಸುವ ಬಗ್ಗೆ ಗುರುವಾರ ಬಸ್‌ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರಂಭಿಕ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿ, ಅಪರಾಧಗಳನ್ನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ. ಒಂದು ವಾಹನದಲ್ಲಿ ಮೂವರು ಪೊಲೀಸ್‌ ಸಿಬ್ಬಂದಿ ಇರುತ್ತಾರೆ ಎಲ್ಲ ಕರೆಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸುವರು ಎಂದರು. ವಾರ್ಡ್‌ ಬೀಟ್‌ಗಳಲ್ಲಿ 112 ತುರ್ತು ಸೇವೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿಬ್ಬಂದಿ ನೀಡಬೇಕು ಎಂದು ತಾಕೀತು ಮಾಡಿದರು.

ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಲು, ಆಸ್ತಿ ಪಾಸ್ತಿ, ತಮ್ಮ ರಕ್ಷಣೆ, ಆರೋಗ್ಯ, ಪ್ರಾಣ ಹಾನಿ, ಅಪಘಾತ ಸೇರಿದಂತೆ ಯಾವುದೇ ಸಮಸ್ಯೆಗೆ ತಕ್ಷಣ ಪೊಲೀಸ್‌ ಸಹಾಯ ಬೇಕಿದ್ದಲ್ಲಿ 112 ಸಂಖ್ಯೆಗೆ ಕರೆ ಮಾಡಬಹುದು. ಮೊಬೈಲ್‌ ಆ್ಯಪ್‌, ವಾಟ್ಸ್‌ಆ್ಯಪ್, ಇ- ಮೇಲ್‌ ಮೂಲಕ ಸಂದೇಶ ರವಾನಿಸಬಹುದು ಎಂದರು.

ಮಾಸ್ಕ್‌ ಧರಿಸದೇ ಬೈಕ್‌ ಚಾಲನೆ ಮಾಡುವವರಿಗೆ ಪೊಲೀಸರು ದಂಡ ವಿಧಿಸಿದರು. ಪಿಎಸ್‌ಐ ಪ್ರಭು ಕೆಳಗಿಮನಿ, ಟ್ರಾಫಿಕ್‌ ಪಿಎಸ್‌ಐ ಪ್ರಕಾಶ ಶಿಡ್ಲಣ್ಣನವರ, ಪಿಎಸ್‌ಐ ಉದಗಟ್ಟಿ ಹಾಗೂ ಪೊಲೀಸರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.