ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆ ಹಿಂಪಡೆಯಲು ಆಗ್ರಹ

ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ
Last Updated 27 ಜೂನ್ 2022, 15:06 IST
ಅಕ್ಷರ ಗಾತ್ರ

ಹಾವೇರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ’ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ ಸಮಿತಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಮೈಲಾರ ಮಹದೇವಪ್ಪ ವೃತ್ತದ ಬಳಿಯಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಅಗ್ನಿಪಥ್ ಯೋಜನೆ ಜಾರಿಗೊಳಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಅಗ್ನಿಪಥ ಯೋಜನೆಯಿಂದಾಗಿ ದೇಶದ ಯುವಕರ ಬಾಳು ಸಂದಿಗ್ಧ ಸ್ಥಿತಿಯಲ್ಲಿ ಸಿಲುಕಿದಂತಾಗಿದೆ. ಈ ಯೋಜನೆಯಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುವುದಿಲ್ಲ. ದೇಶಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಲಾಲ್‍ಬಹದ್ದೂರ್‌ ಶಾಸ್ತ್ರಿಯವರು ಹೇಳಿದ ‘ಜೈ ಜವಾನ್ ಜೈ ಕಿಸಾನ್’ ಎಂಬ ಘೋಷವಾಕ್ಯದೊಂದಿಗೆ ದೇಶದ ರೈತರು ಮತ್ತು ದೇಶವನ್ನು ಕಾಯುವ ಸೈನಿಕರು ನಮ್ಮ ಎರಡು ಕಣ್ಣುಗಳಿದ್ದಂತೆ ಎಂದು ನಂಬಿದವರು ನಾವು. ಆದರೆ ಮೋದಿ ನೇತೃತ್ವದ ಸರ್ಕಾರ ವೀರ ಯೋಧರ ತ್ಯಾಗ ಬಲಿದಾನಕ್ಕೆ ಬೆಲೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಂ. ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಎಂ.ಎಂ. ಮೈದೂರ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಮುಖರಾದ ಎಸ್‍ಎಫ್‍ಎನ್ ಗಾಜಿಗೌಡ್ರ, ಜಗದೀಶ ಬೆಟಗೇರಿ, ಈರಪ್ಪ ಲಮಾಣಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಗುಡ್ಡಪ್ಪ ಬಣಕಾರ, ಸತೀಶ ಇಳಗೇರ, ಉಮೀದ್ ನದಾಫ್, ಶರತ್ ಎನ್.ಕೆ., ಗಂಗಣ್ಣ ಶಿರೂರು, ಜಾಫರ್ ಅತ್ತಾರ್, ಉಮರ್ ಇನಾಮದಾರ, ವೀರನಗೌಡ ಪಾಟೀಲ ಸೇರಿದಂತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT