ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಡವರ ಅಕೌಂಟ್‍ಗೆ 15 ಪೈಸೆನೂ ಹಾಕಿಲ್ಲ: ಶಾಸಕ ಶ್ರೀನಿವಾಸ ಮಾನೆ

Published 28 ಏಪ್ರಿಲ್ 2024, 16:12 IST
Last Updated 28 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ಅಕ್ಕಿಆಲೂರು: ಬಡವರ ಅಕೌಂಟ್‍ಗೆ ₹15 ಲಕ್ಷ ಹಾಕ್ತೀವಿ ಅಂದರು, ₹15 ಪೈಸೆನೂ ಹಾಕಲಿಲ್ಲ. 10 ವರ್ಷಗಳಿಂದ ಬರೀ ಸುಳ್ಳು ಹೇಳಿದರು, ಮೋಸ ಮಾಡಿದರು. ಈಗ ಜನ ಬೇಸತ್ತು ಹೋಗಿದ್ದು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ನಿರ್ಣಯಿಸಿದ್ದು, ಮೇ 7ಕ್ಕೆ ಮುಹೂರ್ತ ನಿಗದಿಯಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಇಲ್ಲಿನ ಮುತ್ತಿನಕಂತಿಮಠದ ಆವರಣದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 2-3 ದಿನಗಳಲ್ಲಿ ಚುನಾವಣೆಯ ವಾತಾವರಣ ಬದಲು ಮಾಡುವ ಕಾಲ ದೂರವಾಗಿದೆ. ಯಾರು ಹಿತವರು ಎನ್ನುವ ಪ್ರಜ್ಞೆ ಜನರಲ್ಲಿದೆ. ದೇಶದಲ್ಲಿ ಸಂವಿಧಾನ ಉಳಿಯಬೇಕಿದೆ. ಮೋದಿ ಮೋಡಿ ಮ್ಯಾಜಿಕ್ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ದೇಶ ಬದಲಾವಣೆ ಬಯಸುತ್ತಿದೆ. ಬಿಜೆಪಿ ಜನವಿರೋಧಿ ಎನ್ನುವುದು ಪ್ರತಿ ಹಂತಗಳಲ್ಲಿಯೂ ಸಹ ಸಾಬೀತಾಗಿದೆ. ಬರೀ ಶ್ರೀಮಂತರ ಏಳಿಗೆ ಬಯಸುವ ನರೇಂದ್ರ ಮೋದಿ ಅವರು ಜನಸಾಮಾನ್ಯರ ಹಿತ ಕಡೆಗಣಿಸಿದ್ದಾರೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ತಾಪಂ ಮಾಜಿ ಅಧ್ಯಕ್ಷ ಎಲ್.ಕೆ.ಶೇಷಗಿರಿ, ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಗ್ರಾಪಂ ಅಧ್ಯಕ್ಷ ಮಕ್ಬೂಲ್ ರುಸ್ತುಂಖಾನವರ, ಮುಖಂಡರಾದ ಯಾಸೀರಖಾನ್ ಪಠಾಣ, ಗೀತಾ ಪೂಜಾರ, ಕೊಟ್ರಪ್ಪ ಕುದರಿಸಿದ್ದನವರ, ಸದಾಶಿವ ಬೆಲ್ಲದ, ಶಿವು ತಳವಾರ ಇದ್ದರು. ಅನೇಕ ಮುಖಂಡರು, ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಅಕ್ಕಿಆಲೂರಿನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತ್ತು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಅನೇಕರು ಬಿಜೆಪಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು
ಅಕ್ಕಿಆಲೂರಿನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತ್ತು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಅನೇಕರು ಬಿಜೆಪಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT