ಕಾರುಗಳ ಮುಖಾಮುಖಿ ಡಿಕ್ಕಿ: ನಾಲ್ವರ ಸಾವು

ರಾಣೆಬೆನ್ನೂರು: ನಗರದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹತ್ತಿರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರು ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಗುಜರಾತ್ ಮೂಲದ ಕಾರಿನಲ್ಲಿದ್ದ ಮೂವರು, ಕೇರಳ ಮೂಲದ ಕಾರಿನಲ್ಲಿದ್ದ ಒಬ್ಬರು ಮೃತಪಟ್ಟಿದ್ದು, ಮೃತರ ಹೆಸರು ಪತ್ತೆಯಾಗಿಲ್ಲ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬ ಗಂಭೀರ ಗಾಯಗೊಂಡು ರಾಣೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಅಪಘಾತ ನಡೆದ ಸ್ಥಳಕ್ಕೆ ನಗರದ ಸಂಚಾರ ಠಾಣೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಖಂಗೊಂಡಿದ್ದ ವಾಹನಗಳನ್ನು ತೆರವುಗೊಳಿಸಿ, ಇತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.