ಶುಕ್ರವಾರ, ಜುಲೈ 30, 2021
20 °C

‘ಎಸ್ಸಿ ಪಟ್ಟಿಯಿಂದ ಸ್ಪೃಶ್ಯ ಜಾತಿ ಕೈಬಿಡಿ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಸ್ಪೃಶ್ಯ ಜಾತಿಗಳು ಸೇರ್ಪಡೆಯಾಗಿವೆ. ಇದರಿಂದ ಅಸ್ಪೃಶ್ಯ ಜಾತಿಗಳಾದ ಹೊಲೆಯ, ಮಾದಿಗ, ಸಮಗಾರ, ಮೋಚಿ, ಡೋರ ಜಾತಿಗಳಿಗೆ ಅನ್ಯಾಯವಾಗಿದೆ’ ಎಂದು ಮೂಲ ಅಸ್ಪೃಶ್ಯರ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ ಹೇಳಿದರು. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪರಿಶಿಷ್ಟ ಜಾತಿ ಪಟ್ಟಿಯಿಂದ ಲಂಬಾಣಿ, ಬೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಕೈಬಿಡುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಹಾಗೂ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್‌ ನೀಡಿ, ಶೀಘ್ರ ವರದಿ ನೀಡಲು ಸೂಚಿಸಿದೆ. ಹೀಗಾಗಿ ಆಯೋಗಕ್ಕೆ ಸರ್ಕಾರ ನೈಜ ವರದಿ ನೀಡಲಿ’ ಎಂದು ಒತ್ತಾಯಿಸಿದರು. 

‘ನಾವು ಯಾವುದೇ ಜಾತಿಯ ವಿರುದ್ಧ ಹೋರಾಟ ಮಾಡುತ್ತಿಲ್ಲ. ನಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಇಂದಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ನಮಗೆ ನ್ಯಾಯ ಒದಗಿಸಬೇಕು. ಜುಲೈ 20ರಂದು ಈ ಸಂಬಂಧ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ‘ಪತ್ರ ಚಳವಳಿ’ ನಡೆಸುತ್ತೇವೆ. ಮೀಸಲಾತಿ ಎಂಬುದು ನಮ್ಮ ಪಾಲಿಗೆ ಗಗನ ಕುಸುಮವಾಗಿದೆ. ಬಸವಣ್ಣ ಮತ್ತು ಅಂಬೇಡ್ಕರ್‌ ನಮ್ಮ ಪಾಲಿಗೆ ದೇವರು’ ಎಂದು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಜಗದೀಶ ಬೆಟಗೇರಿ, ಎಸ್‌.ಜಿ.ಹೊನ್ನಪ್ಪನವರ, ಹುಚ್ಚಪ್ಪ ಮಾಳಗಿ, ಅಶೋಕ ಮರಿಯಣ್ಣನವರ, ಮಲ್ಲೇಶಣ್ಣ, ಶಂಭು ಕಳಸದ, ಹೊನ್ನೇಶ್ವರ ತಗಡಿನಮನಿ, ಸಂಜಯಗಾಂಧಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು