ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಂಚ ಪ್ರಕರಣ: ಸಿಡಿಪಿಒ ಜಯಶ್ರೀ, ಡಾಟಾ ಎಂಟ್ರಿ ಆಪರೇಟರ್‌ ರಾಜು ಬಂಧನ

Published 17 ಫೆಬ್ರುವರಿ 2024, 13:06 IST
Last Updated 17 ಫೆಬ್ರುವರಿ 2024, 13:06 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ ಹಿರೇಕೆರೂರಿನ ಸ್ಫೂರ್ತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಅನುದಾನ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ, ₹10 ಸಾವಿರ ಲಂಚ ಪಡೆಯುತ್ತಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು (ಸಿಡಿಪಿಒ) ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 

ಹಿರೇಕೆರೂರಿನ ಸಿಡಿಪಿಒ ಜಯಶ್ರೀ ಪಾಟೀಲ್ ಮತ್ತು ಡಾಟಾ ಎಂಟ್ರಿ ಆಪರೇಟರ್‌ ರಾಜು ಅವರನ್ನು ಬಂಧಿಸಲಾಗಿದೆ. 

ಮಹಿಳಾ ಸಾಂತ್ವನ ಕೇಂದ್ರಕ್ಕೆ ಕೇಂದ್ರ ಸರ್ಕಾರದಿಂದ ನೀಡುವ 2023–24ನೇ ಸಾಲಿನ 2ನೇ ಕಂತಿನ ₹1.97 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದ್ದಕ್ಕೆ ₹10 ಸಾವಿರ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಸಂತೋಷ ಠಾಕೂರಪ್ಪ ಅವರು ನೀಡಿದ ದೂರಿನ ಮೇರೆಗೆ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಟ್ರ್ಯಾಪ್‌ ಮಾಡಿದ್ದಾರೆ. 

ಹಾವೇರಿಯ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT