ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

ಜಿಲ್ಲೆಯಲ್ಲಿ 3,360 ವಿದ್ಯಾರ್ಥಿಗಳು ನೋಂದಣಿ: 9 ಕೇಂದ್ರಗಳು
Last Updated 28 ಜುಲೈ 2020, 15:44 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 30 ಹಾಗೂ 31ರಂದು ಸಿ.ಇ.ಟಿ. ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 3,360 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಬೇಕು. ಈ ಕುರಿತಂತೆ ನಗರಸಭೆ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ ಅಗತ್ಯ ಸಾರಿಗೆ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ಲಕ್ಷಣ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮತ್ತು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾವೇರಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ಪಟ್ಟಣದಲ್ಲಿ ಮಾತ್ರ ಸಿಇಟಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದೆ. ಈ ಪರೀಕ್ಷಾ ಕೇಂದ್ರಗಳಿಗೆ ‘ಎ’ ದರ್ಜೆ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಡಲಾಗಿದೆ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕೇಂದ್ರದಿಂದ 200 ಮೀಟರ್ ಪ್ರದೇಶವನ್ನು ಜುಲೈ 30 ಹಾಗೂ 31ರಂದು ‘ನಿಷೇಧಿತ ಪ್ರದೇಶ’ ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜೆ.ಸಿ.ನಿರಂಜನ ಮಾತನಾಡಿ, ‘ಜಿಲ್ಲೆಯಲ್ಲಿ 3,360 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಹಾವೇರಿ ನಗರದಲ್ಲಿ 6, ರಾಣೇಬೆನ್ನೂರಿನಲ್ಲಿ 2 ಹಾಗೂ ಹಿರೇಕೆರೂರು ತಾಲ್ಲೂಕಿನ ಒಂದು ಪರೀಕ್ಷಾ ಗುರುತಿಸಲಾಗಿದೆ.

ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಿಸಲಾಗಿದೆ. ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಕರ್ಜಗಿ ಮೊರಾರ್ಜಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. ಇದರ ಮೇಲ್ವಿಚಾರಣೆಗೆ ತಾಲ್ಲೂಕು ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಹಾಗೂ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಬರಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ವೇಳಾಪಟ್ಟಿ:ಜುಲೈ 30 ರಂದು ಬೆಳಿಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ, ಜುಲೈ 31 ರಂದು ಬೆಳಿಗ್ಗೆ 10.30 ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT