ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟದಲ್ಲಿ ಪ್ರತಿಭಾವಂತ ಸಚಿವರಿದ್ದಾರೆ: ಬಸವರಾಜ ಬೊಮ್ಮಾಯಿ

Last Updated 1 ಸೆಪ್ಟೆಂಬರ್ 2021, 8:24 IST
ಅಕ್ಷರ ಗಾತ್ರ

ತಡಸ (ಹಾವೇರಿ): ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ, ದಕ್ಷತೆ, ಪ್ರತಿಭೆಯ ಬಗ್ಗೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರು ಮೆಚ್ಚುಗೆಯ ಮಾತುಗಳನ್ನಾಡಿದರು.

ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಕೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದಿನ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲ್ ಅನ್ನು ತೆರೆಯಲಾಗುವುದು. ಗ್ರಾಮದ ಯುವಕ- ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದರು.

‘ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸಣ್ಣ ಮಾತ್ರ’ ಎಂದು ಸಂತಸದ ನುಡಿಗಳನ್ನಾಡಿದರು.

ವಾಜಪೇಯಿ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನೆ

ಹಾವೇರಿ ಜಿಲ್ಲೆಯಶಿಗ್ಗಾವಿ ತಾಲ್ಲೂಕು ಬಾಡ ಗ್ರಾಮದಲ್ಲಿ ₹20.82 ಕೋಟಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಟಲ್ ಬಿಹಾರಿ ವಾಜಪೇಯಿ ವಸತಿ ನಿಲಯದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರುಬುಧವಾರ ಉದ್ಘಾಟಿಸಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಖಾತೆ ಸಚಿವ ಸಿ.ಸಿ ಪಾಟೀಲ ಉಪಸ್ಥಿತರಿದ್ದರು.

ಬಂಕಾಪುರದಲ್ಲಿ ಶಾದಿ ಮಹಲ್ ಉದ್ಘಾಟನೆ

ಬೊಮ್ಮಾಯಿ ಅವರು ಸ್ವಕ್ಷೇತ್ರ ಶಿಗ್ಗಾವಿ ತಾಲ್ಲೂಕು ಬಂಕಾಪುರ ಪಟ್ಟಣದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶಾದಿ ಮಹಲ್ ನೂತನ ಕಟ್ಟಡವನ್ನು ಉದ್ಘಾಟಿಸಿದರು.ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಖಾತೆ ಸಚಿವ ಸಿ.ಸಿ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT