ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲಕಾರ್ಮಿಕ ಪದ್ಧತಿ: ಜಾಗೃತಿ ಜಾಥಾ

Published 12 ಜೂನ್ 2023, 16:43 IST
Last Updated 12 ಜೂನ್ 2023, 16:43 IST
ಅಕ್ಷರ ಗಾತ್ರ

ಹಾವೇರಿ: ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಸೋಮವಾರ ಚಾಲನೆ ನೀಡಿದರು.

ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ನಗರದ ಜೆ.ಪಿ ರೋಟರಿ ಶಾಲೆಯಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಪುಟ್ಟರಾಜು ಅವರು ಉದ್ಘಾಟಿಸಿ ಮಾತನಾಡಿದರು.

ಸಹಾಯಕ ಕಾನೂನು ನೆರವು ಅಭೀರಕ್ಷಕ ಎನ್.ಎನ್.ದಿಳ್ಳೆಪ್ಪನವರ, ಪೊಲೀಸ್ ಇಲಾಖೆಯ ಎಂ.ಆರ್. ಜಾಲಗಾರ ಬಾಲಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣದ ಬಗ್ಗೆ ಹಾಗೂ ಬಾಲಕಾರ್ಮಿಕ ಕಾರ್ಯವಿಧಾನದ ಬಗ್ಗೆ ಉಪನ್ಯಾಸ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಾವೇರಿ ಶಹರ ಪೊಲೀಸ್ ಠಾಣೆ ಸಿಪಿಐ ಸುರೇಶ ಸಗರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್‌, ಜಿಲ್ಲಾ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಮಾರುತಿ ಎನ್.ಕೆ, ಶಾಲಾ ಮುಖ್ಯೋಪಾಧ್ಯಾಯ ಸಿ.ಎ.ದಳವಾಯಿ, ದೈಹಿಕ ಶಿಕ್ಷಣ ಶಿಕ್ಷಕ ಆರ್.ಜಿ.ಮೇಟಿ ಇದ್ದರು. ಕು.ದೀಪಾ ಕುಲಕರ್ಣಿ ನಿರೂಪಿಸಿದರು. ರಾಘವೇಂದ್ರ ಶಿರೂರ ಸ್ವಾಗತಿಸಿದರು.

ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಡಿವೈಎಸ್ಪಿ ಶಿವಾನಂದ ಚಲವಾದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT