ರಾಣೆಬೆನ್ನೂರು: ನಗರದ ವಿವಿಧೆಡೆ ದಾಳಿ ನಡೆಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ಐದು ಮಂದಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

ಇಲ್ಲಿನ ನೆಹರೂ ಮಾರುಕಟ್ಟೆ, ಎಂ.ಜಿ. ರಸ್ತೆ, ಬಸ್ ನಿಲ್ದಾಣ, ಪಿ.ಬಿ. ರಸ್ತೆ ಮುಂತಾದ ಕಡೆಗಳಲ್ಲಿ ಚಪ್ಪಲಿ ಅಂಗಡಿ, ಕಿರಾಣಿ, ಹೊಟೇಲ್ ಹಾಗೂ ಟೈರ್ ಅಂಗಡಿಗಳಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ದಾಳಿ ನಡೆಸಿದರು.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ತಹಶೀಲ್ದಾರ್ ಬಸನಗೌಡ ಕೋಟೂರ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಲಲಿತಾ ಸಾತೇನಹಳ್ಳಿ, ಕಾರ್ಮಿಕ ಇಲಾಖೆ ಪಿ.ಜಿ. ಬಾಲಾಜಿ, ಕ್ಷೇತ್ರ ಸಮನ್ವಯ ಶಿಕ್ಷಣ ಅಧಿಕಾರಿ ಎಸ್.ವಿ.ಸೀಮೀಕೇರಿ ದಾಳಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.