ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಿನಕಾಯಿ ದಾಖಲೆ ಆವಕ

ಮಾರುಕಟ್ಟೆ ಇತಿಹಾಸದಲ್ಲಿ ದಾಖಲೆಯ ಆವಕ
Published 15 ಫೆಬ್ರುವರಿ 2024, 22:46 IST
Last Updated 15 ಫೆಬ್ರುವರಿ 2024, 22:46 IST
ಅಕ್ಷರ ಗಾತ್ರ

ಬ್ಯಾಡಗಿ (ಹಾವೇರಿ ಜಿಲ್ಲೆ): ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಗುರುವಾರ 83,568 ಕ್ವಿಂಟಲ್‌ (3,34,272 ಚೀಲ) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ದಿಢೀರ್‌ ಹೆಚ್ಚಳ ಕಂಡುಬಂದಿದೆ. ಮಾರುಕಟ್ಟೆ ಇತಿಹಾಸದಲ್ಲಿ ಇದು ದಾಖಲೆಯ ಆವಕವಾಗಿದೆ.

ಎರಡು ವರ್ಷಗಳ ಹಿಂದೆ ಗರಿಷ್ಠ 61,782 ಕ್ವಿಂಟಲ್‌ (2,47,127) ಚೀಲ ಆವಕವಾಗಿತ್ತು. ರಾಜ್ಯದಲ್ಲಿ ಬರ ಇದ್ದರೂ ಮೆಣಸಿನಕಾಯಿ ಬೆಳೆಗಾರರು ಬಂಪರ್‌ ಬೆಳೆ ಬೆಳೆದಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಗುರುವಾರ 33,118 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟ ಇಲ್ಲದ 774 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 18 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹52,009, 12 ಚೀಲ ಕಡ್ಡಿ ಮೆಣಸಿನಕಾಯಿ ₹41,369ಕ್ಕೆ ಗರಿಷ್ಠ ಬೆಲೆಯಲ್ಲಿ ಮಾರಾಟ ಆಗಿದೆ. ‌

ಕಳೆದ ಸೋಮವಾರಕ್ಕಿಂತ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹5 ಸಾವಿರ, ಕಡ್ಡಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹10 ಸಾವಿರ ದರ ಇಳಿಕೆಯಾಗಿದೆ.

ಗುಂಟೂರು ತಳಿ ಮಾತ್ರ ಕ್ವಿಂಟಲ್‌ಗೆ ₹18,129ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗುವ ಮೂಲಕ ಧಾರಣೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹40,059, ಬ್ಯಾಡಗಿ ಕಡ್ಡಿ ₹36,059 ಹಾಗೂ ಗುಂಟೂರು ತಳಿ ₹14,009ಕ್ಕೆ ಮಾರಾಟವಾಗಿದೆ.

ಗುರುವಾರದ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 379 ಖರೀದಿದಾರರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT