ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯದಲ್ಲಿ ನಿರ್ಲಕ್ಷ್ಯ: ಪೌರಾಯುಕ್ತ ಅಮಾನತು

Published 14 ಏಪ್ರಿಲ್ 2024, 15:29 IST
Last Updated 14 ಏಪ್ರಿಲ್ 2024, 15:29 IST
ಅಕ್ಷರ ಗಾತ್ರ

ಹಾವೇರಿ: ಅಂಬೇಡ್ಕರ್‌ ಜಯಂತಿ ಆಚರಣೆಯ ಸಿದ್ಧತೆ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಹಾವೇರಿ ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಅವರನ್ನು ಅಮಾನತುಗೊಳಿಸಿ ಆದೇಶಿಸಿರುವ ಜಿಲ್ಲಾಧಿಕಾರಿ, ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಿದ್ದಾರೆ.

ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಗಾಗಿ ನಗರದ ಅಂಬೇಡ್ಕರ್‌ ವೃತ್ತದಲ್ಲಿರುವ ಅವರ ಪುತ್ಥಳಿ, ಸರ್ಕಲ್‌ನಲ್ಲಿ ಸುಣ್ಣಬಣ್ಣ ಮಾಡದೇ ಪೌರಾಯುಕ್ತರು ನಿರ್ಲಕ್ಷ್ಯ ತೋರಿರುವ ಬಗ್ಗೆ ಸಾರ್ವಜನಿಕರು ದೂರಿದ್ದರು. ಸ್ಥಳಕ್ಕೆ ಅಧಿಕಾರಿಗಳ ತಂಡ ಆಗಮಿಸಿದ್ದರೂ ಅಲ್ಲಿಗೆ ಪೌರಾಯುಕ್ತ ಪರಶುರಾಮ ಚಲುವಾದಿ ಬಂದಿರಲಿಲ್ಲ. ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ತಮ್ಮ ಹಂತದಲ್ಲಿ ಪೌರಾಯುಕ್ತರನ್ನು ಅಮಾನತುಗೊಳಿಸಿ, ಅನುಮೋದನೆಗಾಗಿ ಸರ್ಕಾರಕ್ಕೆ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT