ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತಾ ಕಾರ್ಯ, ದೀಪಗಳ ದುರಸ್ತಿಗೆ ಸೂಚನೆ

ಸಂಚಾರಿ ಶೌಚಾಲಯಗಳ ಅಳವಡಿಕೆ: ಜಿಲ್ಲಾಧಿಕಾರಿ ರಘುನಂದನಮೂರ್ತಿ ಸೂಚನೆ
Last Updated 7 ಡಿಸೆಂಬರ್ 2022, 14:37 IST
ಅಕ್ಷರ ಗಾತ್ರ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಮಾರ್ಗ ಸೇರಿದಂತೆ ನಗರದ ಒಳಗೆ ಜಂಗಲ್ ಕಟಿಂಗ್, ಸ್ವಚ್ಛತಾ ಕಾರ್ಯ, ಬೀದಿ ದೀಪಗಳ ದುರಸ್ತಿ ಸೇರಿದಂತೆ ನಗರದ ಸ್ವಚ್ಛತೆಗೆ ವಿಶೇಷ ಕಾರ್ಯಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದುಜಿಲ್ಲಾಧಿಕಾರಿ ರಘುನಂದನಮೂರ್ತಿ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ಸಮ್ಮೇಳನದ ಕೆಲಸ ಕಾರ್ಯಗಳಿಗಾಗಿ ರಚಿಸಲಾದ 20 ಸಮಿತಿಗಳ ಸದಸ್ಯ ಕಾರ್ಯದರ್ಶಿಗಳೊಂದಿಗೆ ಬುಧವಾರ ಸಭೆ ನಡೆಸಿದರು.

ಮೆರವಣಿಗೆ ಮಾರ್ಗದೂದ್ದಕ್ಕೂ ಕುಡಿಯುವ ನೀರಿನ ವ್ಯವಸ್ಥೆ, ಮೂರು ಪಾಳೆಯದಲ್ಲಿ ಸ್ವಚ್ಛತಾಗಾರರ ನಿಯೋಜನೆ, ಹೊರ ಸೇವೆ ಆಧಾರದ ಮೇಲೆ ಹೆಚ್ಚುವರಿ ಸ್ವಚ್ಛತಾಗಾರರನ್ನು ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಮೆರವಣಿಗೆ ಮಾರ್ಗದಲ್ಲಿ ಸಂಚಾರಿ ಶೌಚಾಲಯಗಳ ಅಳವಡಿಕೆ ಯೋಜನೆ ಸೇರಿದಂತೆ ಪೌರಾಯುಕ್ತರು ಸಮಿತಿಯ ತೀರ್ಮಾನಗಳನ್ನು ವಿವರಿಸಿದರು.

ನಗರ ಅಲಂಕಾರ ಸಮಿತಿಯಿಂದ ಪ್ರತಿ ವೃತ್ತದಲ್ಲಿ ಹೂ ಹಾಗೂ ವಿದ್ಯುತ್ ದೀಪಾಲಂಕಾರ, ಎಲ್ಲ ಕಟ್ಟಡಗಳ ಮೇಲೆ ವಿದ್ಯುತ್ ದೀಪಾಲಂಕಾರ, ಸರ್ಕಾರಿ ಕಚೇರಿಗಳಲ್ಲಿ ಆಯಾ ಇಲಾಖೆ ವೆಚ್ಚದಲ್ಲಿ ದೀಪಾಲಂಕಾರ ಮಾಡುವ ಕುರಿತಂತೆ ಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಮ್ಮೇಳನಕ್ಕೆ ಆಗಮಿಸುವ ನೋಂದಾಯಿತ ಪ್ರತಿನಿಧಿಗಳು, ಗಣ್ಯರು, ಅತಿ ಗಣ್ಯರು, ಮಾಧ್ಯಮದವರಿಗೆ ವಸತಿ ವ್ಯವಸ್ಥೆ, ಮಹಿಳೆಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ, ವಸತಿ ಹಂಚಿಕೆ, ವಸತಿ ಸ್ಥಳಗಳಿಂದ ಸಾರಿಗೆ ವ್ಯವಸ್ಥೆ, ವಸತಿ ಸ್ಥಳಗಳಲ್ಲಿ ಮೂಲ ಸೌಕರ್ಯಗಳು, ಸುರಕ್ಷತಾ ಕ್ರಮಗಳ ಕುರಿತಂತೆ ಸಮಿತಿಯ ತೀರ್ಮಾನಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.

ಆರೋಗ್ಯ ಸುರಕ್ಷಾ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯಕ್ರಮದ ಸ್ಥಳದಲ್ಲಿ ಹಾಗೂ ವಸತಿ ಸ್ಥಳಗಳಲ್ಲಿ ವೈದ್ಯಕೀಯ ಉಪಚಾರದ ವ್ಯವಸ್ಥೆ, ಆಂಬುಲೆನ್ಸ್‌ ವ್ಯವಸ್ಥೆ ಸೇರಿದಂತೆ ಸಮಿತಿಯಿಂದ ಯೋಜಿಸಿದ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ ವಿವರಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಡಿಡಿಪಿಯು ಉಮೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಕಟ್ಟಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT