ಸವಣೂರು (ಹಾವೇರಿ ಜಿಲ್ಲೆ): ‘ನಾನು ಕ್ಷೇತ್ರ ಬಿಡ್ತೀನಿ ಅಂತ ಯಾರ್‍ರೀ ಹೇಳಿದ್ದು?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮದವರ ಮೇಲೆ ಸಿಟ್ಟಿನಿಂದ ಸೋಮವಾರ ಹರಿಹಾಯ್ದರು.
ಸವಣೂರಿನ ಉಪವಿಭಾಗಾಧಿಕಾರಿಗಳ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುವಾಗ, ‘ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರ ಬಿಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ’ ಎಂಬ ಪ್ರಶ್ನೆ ಎದುರಾಯಿತು. ‘ಯಾವನ್ ಹೇಳಿದ್ದು..?. ಯಾವುದೇ ಕಾರಣಕ್ಕೂ ಶಿಗ್ಗಾವಿ ಕ್ಷೇತ್ರ ಬಿಡೋದಿಲ್ಲ‘ ಎಂದು ಕೋಪದಿಂದ ಹೇಳಿದರು.
’ಈ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ರಂಗದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕೆಲಸಗಳು ಈ ಕ್ಷೇತ್ರದಲ್ಲಿ ಆಗಿವೆ. ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಎಲ್ಲ ಕೆಲಸಗಳನ್ನು ಮಾಡಿದ್ದೇನೆ. ಶೀಘ್ರದಲ್ಲಿ ಹಾವೇರಿ ಮೆಡಿಕಲ್ ಕಾಲೇಜು ಉದ್ಘಾಟಿಸಲಿ ದ್ದೇನೆ’ ಎಂದು ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.