ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಚನಾತ್ಮಕ ಕಾರ್ಯ ಕೈಗೊಳ್ಳಿ: ರಂಭಾಪುರಿ ಶ್ರೀ

Published 3 ಏಪ್ರಿಲ್ 2024, 15:41 IST
Last Updated 3 ಏಪ್ರಿಲ್ 2024, 15:41 IST
ಅಕ್ಷರ ಗಾತ್ರ

ರಾಣೆಬೆನ್ನೂರು: ವೀರಶೈವ ಧರ್ಮದಲ್ಲಿ ಕಾಯಕ ಧರ್ಮಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಕ್ರಿಯಾಶೀಲ ಬದುಕು ಶ್ರೇಯಸ್ಸಿಗೆ ಮೂಲ. ಸಮುದಾಯದ ಅಭಿವೃದ್ದಿಗೆ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸುಕ್ಷೇತ್ರ(ಸ್ಪಟಿಕ ಲಿಂಗ) ಲಿಂಗದಹಳ್ಳಿ ಹಿರೇಮಠದಲ್ಲಿ ಬುಧವಾರ ನೂತನವಾಗಿ ನಿರ್ಮಿಸಿದ ಸ್ವಯಂಭು ಸೋಮೇಶ್ವರ ಮಾಂಗಲ್ಯ ಮಂದಿರ ಉದ್ಘಾಟಿಸಿ ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಅವರು ಆಶೀರ್ವಚನ ನೀಡಿದರು.

ಭಗವಂತನಿತ್ತ ಕೊಡುಗೆಗೆ ಸರಿ ಸಾಟಿಯಾದುದು ಇನ್ನೊಂದಿಲ್ಲ. ಆ ಭಗವಂತ ಕೊಟ್ಟಿರುವುದನ್ನು ಸದುಪಯೋಗ ಪಡಿಸಿಕೊಳ್ಳಬೇಕಾದುದು ಮನುಷ್ಯನ ಧರ್ಮವಾಗಿದೆ ಎಂದರು.

ಲಿಂಗದಹಳ್ಳಿ ಗ್ರಾಮದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಕಣ್ವಕುಪ್ಪಿ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು, ಮಳಲಿ ಸಂಸ್ಥಾನ ಮಠದ ನಾಗಭೂಷಣ ಶಿವಾಚಾರ್ಯರು, ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ನಾಗವಂದ ಹೊರಗಿನಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ನುಡಿ ನಮನ ಸಲ್ಲಿಸಿದರು.

ರಂಭಾಪುರಿ ಶ್ರೀಗಳ 33ನೇ ವರ್ಷದ ಪೀಠಾರೋಹಣದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಮಹೋತ್ಸವ, ಸ್ವಯಂಭು ಸೋಮೇಶ್ವರ ಮಾಂಗಲ್ಯ ಮಂದಿರ ಲೋಕಾರ್ಪಣೆ ಮತ್ತು ಇಷ್ಟಲಿಂಗ ಮಹಾಪೂಜೆ ನೆರವೇರಿದವು. ಹುಬ್ಬಳ್ಳಿಯ ಮಹಿಳಾ ಮಂಡಳದ ಸದಸ್ಯರಿಂದ ಭಕ್ತಿ ಗೀತೆ ಕಾರ್ಯಕ್ರಮ ನಡೆಸಿಕೊಟ್ಟರು. ಮಾಸೂರಿನ ಗುರುಪ್ರಸಾದ ಹಿರೇಮಠ ನಿರೂಪಿಸಿದರು.

ರಾಣೆಬೆನ್ನೂರು ತಾಲ್ಲೂಕಿನ ಸುಕ್ಷೇತ್ರ ಲಿಂಗದಹಳ್ಳಿ ಗ್ರಾಮದಲ್ಲಿ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅವರಿಗೆ ಇಷ್ಟಲಿಂಗ ಮಹಾಪೂಜೆ ನೆರವೇರಿತು
ರಾಣೆಬೆನ್ನೂರು ತಾಲ್ಲೂಕಿನ ಸುಕ್ಷೇತ್ರ ಲಿಂಗದಹಳ್ಳಿ ಗ್ರಾಮದಲ್ಲಿ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅವರಿಗೆ ಇಷ್ಟಲಿಂಗ ಮಹಾಪೂಜೆ ನೆರವೇರಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT