ಗುರುವಾರ , ಮೇ 26, 2022
25 °C
ಕೋವಿಡ್ ಮರಣ ಪ್ರಮಾಣ ತಗ್ಗಿಸಲು ಸಲಹೆ

ಬೆಳೆ ಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ಸಚಿವ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಕೋವಿಡ್ ನಿಯಂತ್ರಣ ಹೆಚ್ಚು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಕೋವಿಡ್ ಸೋಂಕಿನಿಂದ ಮರಣ ಹೊಂದುವವರ ಸಂಖ್ಯೆ ಶೇ 1.8ರಷ್ಟಿದೆ. ಈ ಪ್ರಮಾಣ ಮತ್ತಷ್ಟು ತಗ್ಗಿಸಲು ತೀವ್ರ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಕೋವಿಡ್ ನಿಯಂತ್ರಣ ಕುರಿತು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು,  ಆರ್‌ಟಿಪಿಸಿಆರ್‌ ಪರೀಕ್ಷೆಗಳನ್ನು ಹೆಚ್ಚು ಮಾಡಲು ಅವರು ಸೂಚನೆ ನೀಡಿದರು. 

ಪ್ರಸಕ್ತ ಸಾಲಿನ ಮನೆಗಳ ಹಾನಿ ಹಾಗೂ ಬೆಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಸಮೀಕ್ಷೆ ಮಾಹಿತಿಯನ್ನು ತ್ವರಿತವಾಗಿ ತಂತ್ರಾಂಶದಲ್ಲಿ ಅಳವಡಿಸಿ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ತ್ವರಿತ ಕ್ರಮ ವಹಿಸಲು ಸೂಚನೆ ನೀಡಿದರು.

2019-20ನೇ ಸಾಲಿನಲ್ಲಿ ಬೆಳೆ ಪರಿಹಾರ ವಿತರಣೆಯಲ್ಲಿ ನಡೆದಿರುವ ಲೋಪ ಕುರಿತಂತೆ ಕೈಗೊಂಡಿರುವ ಪೊಲೀಸ್‌ ತನಿಖೆಯ ಪ್ರಗತಿಯ ಮಾಹಿತಿ ಪಡೆದ ಗೃಹ ಸಚಿವರು ತ್ವರಿತವಾಗಿ ತನಿಖಾ ಕಾರ್ಯ ಪೂರ್ಣ ಗೊಳಿಸಿ. ಅರ್ಹರಿಗೆ ಪರಿಹಾರ ವಿತರಣೆಗೆ ಅನುಕೂಲವಾಗಲಿದೆ. ತನಿಖೆಯ ವಿಳಂಬದಿಂದ ಅಂದಾಜು 10 ಸಾವಿರ ರೈತರ ಪರಿಹಾರ ಪಡೆಯುವಲ್ಲಿ ವಿಳಂಬವಾಗಿದೆ. ತನಿಖೆ ಆದಷ್ಟು ಬೇಗ ಪೂರ್ಣಗೊಳಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು