ವಿದ್ಯುತ್ ದರ ಏರಿಕೆಗೆ ಖಂಡನೆ

ಹಾವೇರಿ: ರಾಜ್ಯ ಸರ್ಕಾರ ವಿದ್ಯುತ್ ಏರಿಕೆ ಮಾಡಿರುವುದನ್ನು ಖಂಡಿಸಿ, ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು.
ಬೆಳಗಾವಿ ವಿಭಾಗೀಯ ಸಮಿತಿ ಅಧ್ಯಕ್ಷ ಎನ್.ಎನ್. ಗಾಳೆಮ್ಮನವರ ಮಾತನಾಡಿ, ‘ಈಗಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ಯಾವುದೇ ಕಾನೂನು ರೂಪಿಸಿಲ್ಲ. ಕಳಪೆ ಬಿತ್ತನೆ ಬೀಜಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಕೀಲ ಸತೀಶ ಕಾಟೇನಹಳ್ಳಿ, ಸುಶೀಲಾ ಕೋಮನಾಳ, ಮೆಹರ ನಿಗಾರ್, ಭಾಗ್ಯಮ್ಮ ಮಂಜೂಳಕರ, ಯಲ್ಲವ್ವ ಬಂಡಿವಡ್ಡರ, ಲಕ್ಷಮ್ಮ ಕೊರಿಪು, ಬಸಯ್ಯ ಹಿರೇಮಠ, ವನಜಾಕ್ಷಿ ಹಳೂರ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.