ಮಂಗಳವಾರ, ಮಾರ್ಚ್ 9, 2021
29 °C
ಕೇಂದ್ರದ ರೈತ ವಿರೋಧಿ ನೀತಿ ಖಂಡನೀಯ: ತಹಸೀಲ್ದಾರ್‌

ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾನಗಲ್: ‘ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ನೂತನ ಕೃಷಿ ಕಾಯ್ದೆಗಳು ದೇಶದ ಕೃಷಿಕರಿಗೆ ಮರಣ ಶಾಸನವಾಗಿ ಪರಿಣಮಿಸಿವೆ. ಎಪಿಎಂಸಿ ಮೂಲೆಗುಂಪು ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿರುವುದು ಖಂಡನೀಯ’ ಎಂದು ಮಾಜಿ ಸಚಿವ ಮನೋಹರ ತಹಸೀಲ್ದಾರ್‌ ಹೇಳಿದರು.

ಕೃಷಿಗೆ ಸಂಬಂಧಿಸಿದ ಮೂರು  ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ನಡೆಸಿದ ಒಂದು ದಿನದ ಉಪವಾಸ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದರು.

ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ರಾಘವೇಂದ್ರ ತಹಸೀಲ್ದಾರ್, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಶಂಕ್ರಣ್ಣ ಪ್ಯಾಟಿ, ರಾಮಣ್ಣ ಶೇಷಗಿರಿ, ಪುರಸಭೆ ಸದಸ್ಯ ನಾಗಪ್ಪ ಸವದತ್ತಿ, ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿಯಾಜ್ ಶೇಖ್, ಮುಖಂಡರಾದ ಸಿ.ಎಸ್. ಬಡಿಗೇರ, ಪುಟ್ಟಪ್ಪ ವಾಸನದ, ನಜೀರ್ ಗಿರಿಸಿನಕೊಪ್ಪ, ಚನ್ನಬಸನಗೌಡ ಪಾಟೀಲ, ಮಖಬೂಲ್‌ಅಹ್ಮದ್ ಸರ್ವಿಕೇರಿ, ಗುಡ್ಡಪ್ಪ ಸುಂಕದ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು