ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುರ್ಚಿ ಭದ್ರಪಡಿಸಿಕೊಳ್ಳಲು ಕಾಂಗ್ರೆಸ್‌ ಸಚಿವರ ಓಡಾಟ: ಬೊಮ್ಮಾಯಿ ಟೀಕೆ

Published 5 ಏಪ್ರಿಲ್ 2024, 19:37 IST
Last Updated 5 ಏಪ್ರಿಲ್ 2024, 19:37 IST
ಅಕ್ಷರ ಗಾತ್ರ

ಹಾವೇರಿ: ‘ಜನರ ಕೆಲಸ ಮಾಡಲು ಕಾಂಗ್ರೆಸ್‌ ಸರ್ಕಾರದಲ್ಲಿ ಸಮಯವಿಲ್ಲ. ಸಚಿವರು ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಓಡಾಡುತ್ತಿದ್ದಾರೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ. 6 ತಿಂಗಳು ಅಥವಾ ವರ್ಷದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. 

ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ಕಾಂಗ್ರೆಸ್‌ನಲ್ಲಿ ಕೆಲವು ಸಚಿವರಿಗೆ ಲೋಕಸಭಾ ಚುನಾವಣೆಗೆ ನಿಲ್ಲಿ ಎಂದಿದ್ದರು. ಏಕೆಂದರೆ, ಐದು ಗ್ಯಾರಂಟಿಗಳ ಜೊತೆ ಸೋಲುವ ಗ್ಯಾರಂಟಿ ಕೂಡ ಇತ್ತು. ಈ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ, ಭ್ರಷ್ಟಾಚಾರ, ಶೂನ್ಯ ಅಭಿವೃದ್ಧಿ ಗ್ಯಾರಂಟಿ’ ಎಂದರು. 

‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಲ್ಲಿ ಸಿದ್ದರಾಮಯ್ಯನವರು ಎಂಥ ಕೆಟ್ಟ ಆಡಳಿತ ನೀಡಿದ್ದಾರೆ ಎಂಬುದು ಜನರಿಗೆ ಗೊತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT