ಶುಕ್ರವಾರ, ಜುಲೈ 30, 2021
23 °C

‘ಡಿಕೆ ಶಿವಕುಮಾರ್ ಪದಗ್ರಹಣ’ ನೇರಪ್ರಸಾರ ವೀಕ್ಷಿಸಿದ 10 ಸಾವಿರ ಮಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಅಧಿಕಾರ ಸ್ವೀಕರಿಸಿದ ‘ಪದಗ್ರಹಣ’ ಕಾರ್ಯಕ್ರಮದ ನೇರಪ್ರಸಾರವನ್ನು ಜಿಲ್ಲೆಯಲ್ಲಿ 10 ಸಾವಿರ ಮಂದಿ ವೀಕ್ಷಿಸಿದರು. 

ನಗರದ ಸಜ್ಜನರ ಫಂಕ್ಷನ್‌ ಹಾಲ್‌, ಮೈಲಾರ ಮಹದೇವಪ್ಪ ಸರ್ಕಲ್‌, ಸುಭಾಷ್‌ ಸರ್ಕಲ್‌, ಇಜಾರಿಲಕಮಾಪುರದ ದುಂಡಿ ಬಸವೇಶ್ವರ ಸಭಾಭವನ ಮತ್ತು ನಾಗೇಂದ್ರಮಟ್ಟಿಯ ಸಮುದಾಯ ಭವನ ಸೇರಿದಂತೆ ಐದು ಕಡೆ ನೇರಪ್ರಸಾರವನ್ನು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ಮುಖಂಡರು ಮತ್ತು ಕಾರ್ಯಕರ್ತರು ವೀಕ್ಷಿಸಿದರು.

ಗ್ರಾಮ ಪಂಚಾಯ್ತಿ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ಸೇರಿದಂತೆ ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿ, ಸಂಭ್ರಮಿಸಿದರು. ಕೆಪಿಸಿಸಿಯಿಂದ ಕೊಟ್ಟಿದ್ದ ಮೊಬೈಲ್‌ ನಂಬರ್‌ಗೆ ಮಿಸ್ಡ್‌ ಕಾಲ್‌ ಕೊಟ್ಟರು. ಕಾರ್ಯಕರ್ತರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ ಹೇಳಿದರು. 

ನಗರದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಮುಖಂಡರಾದ ಡಿ.ಆರ್‌.ಪಾಟೀಲ, ಕೆಪಿಸಿಸಿ ವೀಕ್ಷಕ ಜಯಸಿಂಹ, ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವ ನೀರಲಗಿ, ಎಸ್‌.ಎಫ್‌.ಎನ್‌.ಗಾಜಿಗೌಡ್ರ ಮುಂತಾದವರು ನೇರಪ್ರಸಾರ ವೀಕ್ಷಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು