ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ ನಂತರ ಕಾಂಗ್ರೆಸ್‌ ಇಬ್ಭಾಗ: ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ

Last Updated 26 ಅಕ್ಟೋಬರ್ 2021, 16:48 IST
ಅಕ್ಷರ ಗಾತ್ರ

ಹಾನಗಲ್: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಉಪಚುನಾವಣೆ ನಂತರ ಕಾಂಗ್ರೆಸ್‌ ಇಬ್ಭಾಗವಾಗಲಿದೆ ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ,ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅಸ್ವಸ್ಥರಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತರ ಉದ್ಧಾರಕ ಎಂದು ಬಿಂಬಿಸಿಕೊಳ್ಳುವ ಸಿದ್ದರಾಮಯ್ಯ ಅವರು ‘ಪಿಸುಮಾತು ಪ್ರಕರಣ’ದಲ್ಲಿ ಉಗ್ರಪ್ಪ ಅವರನ್ನು ಕೈಬಿಟ್ಟು, ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಲೀಂ ವಿರುದ್ಧ ಕ್ರಮಕೈಗೊಂಡಿದ್ದೇಕೆ ಎಂದು ಪ್ರಶ್ನಿಸಿದರು.

ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮತಗಳು ಬಿಜೆಪಿ ಪರ ಒಗ್ಗೂಡುತ್ತಿವೆ. ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಹಾಗೂ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದರು.

ಕಂಬಳಿಯನ್ನು ಗದ್ದುಗೆ ದೇವರು ಎಲ್ಲ ಕಡೆ ಬಳಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಂಬಳಿಯನ್ನು ರಾಜಕಾರಣದಲ್ಲಿ ಬಳಸುತ್ತಿರುವುದು ಬೇಸರ ತರಿಸಿದೆ. ಕಂಬಳಿ ಯಾರ ಸ್ವತ್ತೂ ಅಲ್ಲ. ಕಂಬಳಿ ಬಗ್ಗೆ ಮಾತನಾಡಿ, ಕುರುಬರ ಮತ ಸೆಳೆಯಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT