ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ನ್ಯಾಯಯಾತ್ರೆಗೆ ಅಡ್ಡಿ: ಕಾಂಗ್ರೆಸ್‌ ಖಂಡನೆ

Published 25 ಜನವರಿ 2024, 7:01 IST
Last Updated 25 ಜನವರಿ 2024, 7:01 IST
ಅಕ್ಷರ ಗಾತ್ರ

ಹಾವೇರಿ: ಕಾಂಗ್ರೆಸ್ ವರಿಷ್ಠ, ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. 

ಇಲ್ಲಿನ ಮೈಲಾರ ಮಹದೇವ ವೃತ್ತದಿಂದ ಮೆರವಣಿಗೆ ಆರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಮಾವೇಶಗೊಂಡು ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಿಡಿಕಾರಿದರು.

ರಾಹುಲ್‍ಗಾಂಧಿಗೆ ಅಸ್ಸಾಂ ಪ್ರವೇಶ ನಿರಾಕರಿಸಿ ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ‘ಬಿಜೆಪಿ ಅಧಿಕಾರಕ್ಕಾಗಿ ಭಾರತವನ್ನು ವಿಭಜನೆ ಮಾಡುತ್ತಿದೆ. ಆದರೆ, ರಾಹುಲ್‍ಗಾಂಧಿ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆಸ್ಸಾಂನಲ್ಲಿ ನಡೆದ ಘಟನೆಯಿಂದ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಿಜೆಪಿಗೆ ಭಯ ಶುರುವಾಗಿದೆ. ಆ ಕಾರಣಕ್ಕಾಗಿ ತೊಂದರೆ ಕೊಡುತ್ತಿದೆ’ ಎಂದು ಆರೋಪಿಸಿದರು.

ರಾಹುಲ್‍ಗಾಂಧಿ, ಕಾಂಗ್ರೆಸ್ ಯಾವುದಕ್ಕೂ ಹೆದರಲ್ಲ, ದೇಶದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರುತ್ತದೆ ಎಂಬ ಭಯ ಬಿಜೆಪಿಗೆ ಇದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ ಬೆದರಿಸುವ ತಂತ್ರ ನಡೆಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಧಮನಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸದಸ್ಯ ಲಿಂಗರಾಜ ಶಿವಣ್ಣನವರ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಪ್ರಮುಖರಾದ ಈರಪ್ಪ ಲಮಾಣಿ, ಸೋಮಣ್ಣ ಬೇವಿನಮರದ, ಜಮೀರ್ ಜಿಗರಿ, ಎಂ.ಎಂ. ಮೈದೂರು, ಬಸವರಾಜ ಬಳ್ಳಾರಿ ಇತರರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT