ಶನಿವಾರ, ಫೆಬ್ರವರಿ 22, 2020
19 °C

ಚುನಾವಣೆ ಬಳಿಕ ಕಾಂಗ್ರೆಸ್ ವಿಭಜನೆಯಾಗಲಿದೆ: ಬೊಮ್ಮಾಯಿ ಭವಿಷ್ಯ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

ಹಾವೇರಿ: ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯ ಮಾತ್ರವಲ್ಲ ದೇಶದಲ್ಲೇ ಕಾಂಗ್ರೆಸ್ ವಿಭಜನೆಗೊಳ್ಳಲಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು. 

ಹಾವೇರಿಯಲ್ಲಿ ಸೋಮವಾರ ಬಿಜೆಪಿಯ ಹಾವೇರಿ, ಧಾರವಾಡ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳ ಮೋದಿ ವಿಜಯ ಸಂಕಲ್ಪ ಯಾತ್ರೆ ಹಾಗೂ ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಳುಗುವ ಹಡಗು. ಅಲ್ಲಿ ರಾಹುಲ್ ಗಾಂಧಿ ಮಾತನ್ನೇ ಯಾರೂ ಕೇಳುತ್ತಿಲ್ಲ.  ಕಾಶ್ಮೀರದ ಭಯೋತ್ಪಾದನೆ ನಮ್ಮ ಮನೆ ಬಾಗಿಲಿಗೆ ಬರುವುದನ್ನು ತಪ್ಪಿಸಬೇಕಾದರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದರು. 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ 24 ಗಂಟೆಗಳಲ್ಲಿ ರಾಜ್ಯದಲ್ಲೂ ಸರ್ಕಾರ ಬದಲಾಗಿದೆ ಎಂದು ಭವಿಷ್ಯ ನುಡಿದರು. 

ಹಾವೇರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬರುತ್ತಿರುವುದು ಸ್ವಾಗತಾರ್ಹ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನನ್ನ ಕ್ಷೇತ್ರಕ್ಕೆ ರಾಹುಲ್ ಬಂದಿದ್ದರು. ನಾನು ಗೆದ್ದಿರುವುದು ಮಾತ್ರವಲ್ಲ,  ಜಿಲ್ಲೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಬಂತು. ಹೀಗಾಗಿ,  ಹಾವೇರಿಗೆ ರಾಹುಲ್ ಗಾಂಧಿ ಬಂದರೆ ಬಿಜೆಪಿಯ ಶಿವಕುಮಾರ ಉದಾಸಿ ಗೆಲುವು ನಿಶ್ಚಿತ ಎಂದು ಟಾಂಗ್ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು