ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲ್ಲಾಳಿಗಳ ಪರ ಕಾಂಗ್ರೆಸ್‌ ಬ್ಯಾಟಿಂಗ್‌: ನಳೀನ್‌ಕುಮಾರ್‌ ಕಟೀಲ್‌ ಟೀಕೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಟೀಕೆ
Last Updated 29 ಸೆಪ್ಟೆಂಬರ್ 2020, 12:14 IST
ಅಕ್ಷರ ಗಾತ್ರ

ಹಾವೇರಿ: ‘ರೈತಪರ ಮಸೂದೆಗಳ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಹೀನ ರಾಜಕಾರಣ ಮಾಡುತ್ತಾ, ದಲ್ಲಾಳಿಗಳ ಪರವಾಗಿ ಬ್ಯಾಟಿಂಗ್‌ ಮಾಡುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಕಾಯ್ದೆಗಳ ಜಾರಿ ಬಗ್ಗೆ ಕಾಂಗ್ರೆಸ್ ಲೋಕಸಭಾ ಚುನಾವಣೆ ವೇಳೆ ಹೇಳಿತ್ತು. ಈಗ ಬಿಜೆಪಿಗೆ ಲಾಭವಾಗುತ್ತದೆ ಎಂದು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನಿನ್ನೆಯ ಕರ್ನಾಟಕ ಬಂದ್ ವಿಫಲವಾಗಿದೆ. ರಾಜ್ಯದ ಜನರು ಸರ್ಕಾರದ ಪರ ಇದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚೋ ಕೆಲಸ ಮಾಡುತ್ತದೆ.ಹಿಂದೆಯೂ ಮಾಡಿದೆ, ಈಗಲೂ ಮಾಡುತ್ತಿದೆ ಎಂದು ಟೀಕಿಸಿದರು.

ಸಿ.ಎಂ ಬದಲಾವಣೆ ಇಲ್ಲವೇ ಇಲ್ಲ. ಈ ಬಗ್ಗೆ ಎಲ್ಲಿಯೂ ಚರ್ಚೆಗಳು ನಡೆದಿಲ್ಲ. ಸುರೇಶ್‌ ಅಂಗಡಿ ನನಗೆ ಬಹಳ ಆತ್ಮೀಯರು. ಅವರು ಎಂದೂ ಮುಖ್ಯಮಂತ್ರಿ ವಿಚಾರದ ಬಗ್ಗೆ ಚರ್ಚಿಸಿರಲಿಲ್ಲ.ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT