ಹಾವೇರಿ ಜಿಲ್ಲೆಯಾದ್ಯಂತ ನಿರಂತರ ಮಳೆ: ಎಲ್ಲ ಶಾಲೆಗಳಿಗೆ ಎರಡು ದಿನ ರಜೆ

ಹಾವೇರಿ: ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಮೇ 20 ಮತ್ತು 21ರಂದು ( ಶುಕ್ರವಾರ ಮತ್ತು ಶನಿವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ಮಳೆ ಮುಂದುವರಿಯುವ ಸಾಧ್ಯತೆಯ ಮುನ್ಸೂಚನೆ ನೀಡಿರುವ ಕಾರಣ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿಗೆ ಕೆಎಸ್‌ಎನ್‌ಡಿಎಂಸಿಯಿಂದ ‘ಎಲ್ಲೋ ಅಲರ್ಟ್’ ಬಂದಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಜನ-ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.