ಹಾವೇರಿ:ಲಾಕ್‌ಡೌನ್ ಸಂದರ್ಭದಲ್ಲಿ ‘ಸೇವಾ ಹೀ ಸಂಘಟನ್’ ಧ್ಯೇಯದಡಿ ವೃಕ್ಷಾರೋಪಣಾ, ಲಸಿಕಾ ಜಾಗೃತಿ ಅಭಿಯಾನ ಹಾಗೂ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ ಎಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳಿಗೆ ಅಭಿನಂದನೆಗಳು ಸಲ್ಲುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕದಎಸ್.ಟಿ. ಮೋರ್ಚಾ ಅಧ್ಯಕ್ಷಶಿವಾನಂದ ಯಮನಕ್ಕನವರ ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷ ಸಂಘಟನೆಗೆ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸಂಘಟನಾ ಪ್ರಭಾರಿಗಳಾದ ಎಲ್.ಎನ್. ಕಲ್ಲೇಶ ಅವರು ಡಾ.ಶ್ಯಾಮ ಪ್ರಸಾದ ಮುಖರ್ಜಿಯವರ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯರವರ ಬಲಿದಾನಗಳ ಕುರಿತು ಮಾತನಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಎಸ್.ಟಿ ಮೋರ್ಚಾ ಹಲವಾರು ಚಟುವಟಿಕೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ರೀತಿಯಲ್ಲಿ ಮಾಡಿದ್ದು ಶ್ಲಾಘನೀಯ ಮತ್ತು ಎಸ್.ಟಿ ಸಮುದಾಯವನ್ನು ಜಾಗೃತಗೊಳಿಸಿ ಕೋವಿಡ್ ಲಸಿಕೀಕರಣಕ್ಕೆ ಪ್ರೇರೇಪಿಸಿ ಎಂದು ಸಲಹೆ ನೀಡಿದರು.

ಎಸ್.ಟಿ. ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಂಜುನಾಥ ಕರೂರ ಅವರಿಗೆ ಮೌನಾಚರಣೆ ಮೂಲಕ ಗೌರವ ಸಮರ್ಪಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಜಿಲ್ಲಾ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಬಸೆನಾಯ್ಕರ ಮತ್ತು ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.